alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿ ಮೆಟ್ರೋ ಸ್ಟೇಷನ್ ಬಳಿ ನಡೆಯಿತು ವಿಲಕ್ಷಣ ಕೃತ್ಯ

stabbed

ರಾಷ್ಟ್ರ ರಾಜಧಾನಿ ದೆಹಲಿಯ ಗ್ರೀನ್ ಪಾರ್ಕ್ ಮೆಟ್ರೋ ಸ್ಟೇಷನ್ ಬಳಿ ವಿಲಕ್ಷಣ ಕೃತ್ಯವೊಂದು ನಡೆದಿದೆ. ಇದರ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಕೃತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಜಾಕೆಟ್ ಹಾಗೂ ಶಾರ್ಟ್ಸ್ ಧರಿಸಿದ್ದ ವ್ಯಕ್ತಿಯೊಬ್ಬ ಮೂರು ಬೀದಿ ನಾಯಿಗಳನ್ನು ಚೂರಿಯಿಂದ ಮನಬಂದಂತೆ ಇರಿದಿರುವುದಲ್ಲದೇ ಮರಿಯೊಂದನ್ನು ಕ್ರೂರವಾಗಿ ಸಾಯಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ನಾಯಿಗಳನ್ನು ಕಂಡ ಪ್ರಯಾಣಿಕರು ಪೊಲೀಸರಿಗೆ ವಿಷಯ ಮುಟ್ಟಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ನಾಯಿ ಮರಿ ಸ್ಥಳದಲ್ಲೇ ಸಾವಿಗೀಡಾಗಿದ್ದರೆ ಮೂರು ನಾಯಿಗಳು ತೀವ್ರವಾಗಿ ಗಾಯಗೊಂಡಿವೆ. ಸಿಸಿ ಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ 18 ನಿಮಿಷಗಳ ಕಾಲ ಈ ಕೃತ್ಯವೆಸಗಿರುವುದು ಕಂಡು ಬಂದಿದೆ. ಪೊಲೀಸರು ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದರೆ, ಸ್ವಯಂ ಸೇವಾ ಸಂಸ್ಥೆಯೊಂದು ಆರೋಪಿಯ ಸುಳಿವು ನೀಡಿದವರಿಗೆ 1 ಲಕ್ಷ ರೂ.ಬಹುಮಾನ ನೀಡುವುದಾಗಿ ಘೋಷಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...