alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿಸಿದ ತಪ್ಪಿಗೆ ಉಗುಳು ನೆಕ್ಕಿಸಿದರು…!

ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವಕನಿಗೆ ಉಗುಳು ನೆಕ್ಕಿಸಿದ ಪ್ರಕರಣ ಬಿಹಾರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯೊಬ್ಬನಿಗೆ ಗುಂಪೊಂದು ಬಡಿಗೆಯಿಂದ ಬಡಿಯುವುದು, ಕಾಲು ಮುಟ್ಟಿಸುವುದು ಹಾಗೆಯೇ ಅವನ ಉಗುಳು ನೆಕ್ಕಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಹಾರದ ನಳಂದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರೀಗ ವಿಡಿಯೋ ಆಧರಿಸಿ ತನಿಖೆಗಿಳಿದಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಳಂದ ಎಸ್ಪಿ ಸುಧೀರ್ ಕುಮಾರ್, ಪ್ರೇಮ ಪ್ರಕರಣವೊಂದರ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ವಿಡಿಯೋ ಆಧಾರದಲ್ಲಿ ಸ್ಥಳವನ್ನು ಪತ್ತೆ ಹಚ್ಚಿ ತನಿಖೆ ನಡೆಸಲಾಗಿದೆ. ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆದಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಇದೇ ಜಿಲ್ಲೆಯಲ್ಲಿ ಇಂಥದ್ದೇ ಪ್ರಕರಣ ನಡೆದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...