alex Certify
ಕನ್ನಡ ದುನಿಯಾ       Mobile App
       

Kannada Duniya

65 ವರ್ಷದವನಿಗೆ 16 ವರ್ಷದ ಬಾಲಕಿ ಮದುವೆ ಮಾಡಿದ್ದೇಕೆ?

shekh-1

ಒಮಾನ್ ನಲ್ಲಿ ಸಿಕ್ಕಿ ಬಿದ್ದಿರುವ 16 ವರ್ಷದ ಬಾಲಕಿ ಸಹಾಯಕ್ಕೆ ಕೇಂದ್ರ ಸಚಿವೆ ಮನೇಕಾ ಗಾಂಧಿ ಮುಂದೆ ಬಂದಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಜೊತೆ ಮಾತುಕತೆ ನಡೆಸುವುದಾಗಿ ಮನೇಕಾ ಗಾಂಧಿ ಟ್ವೀಟರ್ ಮೂಲಕ ಭರವಸೆ ನೀಡಿದ್ದಾರೆ.

ಮಾಧ್ಯಮಗಳ ವರದಿ ಪ್ರಕಾರ ಮೂರು ತಿಂಗಳ ಹಿಂದೆ 16 ವರ್ಷದ ಬಾಲಕಿಯನ್ನು ಐದು ಲಕ್ಷ ರೂಪಾಯಿಗೆ ಒಮಾನ್ ನಲ್ಲಿರುವ 65 ವರ್ಷದ ವ್ಯಕ್ತಿಗೆ ಮದುವೆ ಮಾಡಿ ಕೊಡಲಾಗಿದೆ. ಈ ಸಂಬಂಧ ಬುಧವಾರ ಹುಡುಗಿ ಪಾಲಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಂಬಂಧಿಕರು ಈ ಮದುವೆ ಮಾಡಿಸಿದ್ದಾರೆಂದು ದೂರಿದ್ದಾರೆ.

ಪ್ರಕರಣದ ಬಗ್ಗೆ ಹೈದ್ರಾಬಾದ್ ಪೊಲೀಸ್ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ. 65 ವರ್ಷದ ವ್ಯಕ್ತಿಗೆ 16 ವರ್ಷದ ಬಾಲಕಿಯನ್ನು ಮದುವೆ ಮಾಡಿಕೊಡುವ ಉದ್ದೇಶವೇನು ಹಾಗೆ ಇದಕ್ಕೆ ಯಾರು ಕಾರಣ ಎಂಬುದರ ಬಗ್ಗೆ ತನಿಖೆಯಾಗ್ತಿದೆ. ಬಾಲಕಿಯನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಬಗ್ಗೆ ಸುಷ್ಮಾ ಸ್ವರಾಜ್ ಜೊತೆ ಮಾತುಕತೆ ನಡೆಸುವುದಾಗಿ ಮನೇಕಾ ಗಾಂಧಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...