alex Certify
ಕನ್ನಡ ದುನಿಯಾ       Mobile App
       

Kannada Duniya

ಅಸ್ವಸ್ಥಗೊಂಡ ಕೇಂದ್ರ ಸಚಿವೆ ಆಸ್ಪತ್ರೆಗೆ ದಾಖಲು

maneka-gandhi7591ಕೇಂದ್ರ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿ ತಮ್ಮ ಸ್ವಕ್ಷೇತ್ರ ಫಿಲಿಬಿಟ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ತೀವ್ರ ಹೊಟ್ಟೆನೋವಿನಿಂದ ಬಳಲಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿಟ್ಟು ತಪಾಸಣೆ ಮಾಡಲಾಗಿದೆ.

ಇದೀಗ ಮನೇಕಾ ಗಾಂಧಿಯವರನ್ನು ಏರ್ ಅಂಬುಲೆನ್ಸ್ ಮೂಲಕ ದೆಹಲಿಗೆ ಕರೆ ತರಲಾಗುತ್ತಿದ್ದು, ದೆಹಲಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲು ಸಿದ್ದತೆ ನಡೆದಿದೆ ಎಂದು ಹೇಳಲಾಗಿದೆ. 60 ವರ್ಷದ ಮನೇಕಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದು, ಫಿಲಿಬಿಟ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...