alex Certify
ಕನ್ನಡ ದುನಿಯಾ       Mobile App
       

Kannada Duniya

ಡೇರಾ ಬೆಂಬಲಿಗರಿಗೆ ಕಠಿಣ ಎಚ್ಚರಿಕೆ ನೀಡಿದ ಮೋದಿ

ನವದೆಹಲಿ: ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಬೆಂಬಲಿಗರು ನಡೆಸಿದ ಹಿಂಸಾಚಾರದ ಕುರಿತು ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ದೇಶದಲ್ಲಿ ಎಲ್ಲರೂ ಕಾನೂನು ಪಾಲಿಸಬೇಕಿದೆ. ಧರ್ಮದ ಹೆಸರಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಹಿಂಸಾಚಾರ ನಡೆದ 3 ದಿನಗಳ ನಂತರ ಪ್ರತಿಕ್ರಿಯೆ ನೀಡಿದ್ದಾರೆ.

ಡೇರಾ ಬೆಂಬಲಿಗರು ಹಿಂಸಾಚಾರಕ್ಕಿಳಿದಾಗ ತಡೆಯುವಲ್ಲಿ ಕೇಂದ್ರ ಹಾಗೂ ಹರಿಯಾಣ ರಾಜ್ಯ ಸರ್ಕಾರಗಳು ಮುಂದಾಗದಿರುವ ಬಗ್ಗೆ ಪಂಜಾಬ್ –ಹರಿಯಾಣ ಹೈಕೋರ್ಟ್ ಛೀಮಾರಿ ಹಾಕಿತ್ತು.

ಭಾನುವಾರ ಬಾನುಲಿಯಲ್ಲಿ 35 ನೇ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಮೋದಿ, ಅಹಿಂಸಾ ಪರಮೋ ಧರ್ಮ ನಮ್ಮ ಧ್ಯೇಯವಾಗಿದೆ. ಯಾವುದೇ ರೂಪದ ಹಿಂಸೆಯನ್ನು ಸಹಿಸುವುದಿಲ್ಲ. ಧರ್ಮದ ಹೆಸರಲ್ಲಿ ಹಿಂಸಾಚಾರಕ್ಕೆ ಆಸ್ಪದ ನೀಡುವುದಿಲ್ಲ. ಎಲ್ಲರೂ ಕಾನೂನು ಪಾಲಿಸಬೇಕಿದೆ ಎಂದು ಹೇಳಿದ್ದಾರೆ.

ಧ್ಯಾನ್ ಚಂದ್ ಅವರನ್ನು ಪ್ರಸ್ತಾಪಿಸಿದ ಮೋದಿ, ಯುವಕರು ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಶಿಕ್ಷಕರು ಬದಲಾವಣೆಯನ್ನು ತಂದವರು. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅವರಿಂದ ಮಾರ್ಗದರ್ಶನ ಪಡೆದುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಆಗಸ್ಟ್ 28 ಕ್ಕೆ ಜನ್ ಧನ್ ಯೋಜನೆ ಆರಂಭವಾಗಿ 3 ವರ್ಷಗಳಾಗುತ್ತಿವೆ. 30 ಕೋಟಿ ಜನರನ್ನು ಇದು ತಲುಪಿದ್ದು, 65,000 ಕೋಟಿ ರೂ. ಜಮಾ ಆಗಿದೆ. 1 ರೂ. ವಿಮೆಯಿಂದ ಹಲವರಿಗೆ ಪ್ರಯೋಜನವಾಗಿದೆ ಎಂದು ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...