alex Certify
ಕನ್ನಡ ದುನಿಯಾ       Mobile App
       

Kannada Duniya

‘ಮನ್ ಕಿ ಬಾತ್’ನಲ್ಲಿ ಹೀಗಿತ್ತು ಮೋದಿ ಮಾತು

man-modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಾನುಲಿಯಲ್ಲಿ 32 ನೇ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ್ದಾರೆ. ಉತ್ತರ, ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿನ ಪ್ರವಾಹ ಸ್ಥಿತಿಯ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಅನೇಕ ರಾಜ್ಯಗಳಲ್ಲಿ ನೆರೆ ಹಾವಳಿ ಉಂಟಾಗಿದೆ. ಜಾಗತಿಕ ತಾಪಮಾನದ ಪ್ರಭಾವದಿಂದ ಅನಾಹುತವಾಗಿದೆ. ಬೆಳೆಗಳೆಲ್ಲಾ ಕೊಚ್ಚಿ ಹೋಗಿವೆ. ರಕ್ಷಣಾ ಕಾರ್ಯಾಚರಣೆ, ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಿ.ಎಸ್.ಟಿ. ವ್ಯವಸ್ಥೆ ಜಾರಿಯಾಗಿದ್ದು, ಹಲವು ಉತ್ಪನ್ನಗಳ ಬೆಲೆ ಕಡಿಮೆಯಾಗಿದೆ. ‘ಒಂದು ದೇಶ ಒಂದು ತೆರಿಗೆ’ ಕನಸು ಸಾಕಾರಗೊಂಡಿದೆ. ದೇಶದ ಆರ್ಥಿಕ ವ್ಯವಸ್ಥೆ ಸುಧಾರಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸ್ವಾತಂತ್ರ್ಯ ದೊರೆತ ಆಗಸ್ಟ್ ತಿಂಗಳು ಕ್ರಾಂತಿಯ ಮಾಸವಾಗಿದೆ. ಆಗಸ್ಟ್ 9 ರಂದು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿ ನಡೆದಿತ್ತು. ಭಾರತೀಯರು ಹೋರಾಟದಲ್ಲಿ ಭಾಗಿಯಾಗಿದ್ದರು. ಸಾವಿರಾರು ಮಂದಿ ಸ್ವಾತಂತ್ರ್ಯಕ್ಕಾಗಿ ಜೀವ ಮುಡಿಪಾಗಿಟ್ಟಿದ್ದರು. ಅವರನ್ನು ನಾವು ಸ್ಮರಿಸಬೇಕಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...