alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಗೋವಾ ಸಿಎಂ

ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ತಜ್ಞ ವೈದ್ಯರಿಂದ ಚಿಕಿತ್ಸೆಯ ಅಗತ್ಯವಿರುವುದರಿಂದ ವಿದೇಶಕ್ಕೆ ತೆರಳುವುದಾಗಿ ಈಗಾಗ್ಲೇ ಗೋವಾ ರಾಜ್ಯಪಾಲರಾದ ಮೃದುಲಾ ಸಿನ್ಹಾಗೂ ಪರಿಕ್ಕರ್ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 15ರಿಂದ್ಲೂ ಪರಿಕ್ಕರ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೇದೋಜೀರಕ ಗ್ರಂಥಿಯಲ್ಲಿ ಸಮಸ್ಯೆಯಿದೆ ಅಂತಾ ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಿಡಿಯೋ ಮೆಸೇಜ್ ಒಂದರಲ್ಲಿ ಪರಿಕ್ಕರ್ ತಮ್ಮ ಚೇತರಿಕೆಗಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

ಗೋವಾದಿಂದ ಮುಂಬೈಗೆ ಬರುವ ಮುನ್ನ ಪರಿಕ್ಕರ್ ತಮ್ಮ ಸಂಪುಟದ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದ್ದರು. ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೂ ಚರ್ಚಿಸಿದ್ದರು. ಫೆಬ್ರವರಿ 22ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ಗೋವಾ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಂಡ ಪರಿಕ್ಕರ್, ಬಜೆಟ್ ಮಂಡನೆ ಮಾಡಿದ್ದರು. ಅದಾಗಿ ಮೂರು ದಿನಗಳ ನಂತರ ಮತ್ತೆ ಡಿಹೈಡ್ರೇಶನ್ ಸಮಸ್ಯೆಯಿಂದಾಗಿ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಅಡ್ಮಿಟ್ ಆಗಿದ್ದರು. ಮಾರ್ಚ್ 1ರಂದು ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...