alex Certify
ಕನ್ನಡ ದುನಿಯಾ       Mobile App
       

Kannada Duniya

ಮರಾಠ ಮಹಾ ಮೆರವಣಿಗೆಗೆ ಸಿಕ್ಕಿದೆ ಗಿಫ್ಟ್

marat-meraavnige

ಮುಂಬೈ: ಮೀಸಲಾತಿಗೆ ಆಗ್ರಹಿಸಿ ಮರಾಠ ಕ್ರಾಂತಿ ಮೋರ್ಚಾ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಮೌನ ಮೆರವಣಿಗೆಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಣಿದಿದ್ದಾರೆ.

ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಮರಾಠ ಸಮುದಾಯ ಮಾಡಿದ ಮನವಿಗೆ ಸ್ಪಂದಿಸಿ ಹಲವು ಕೊಡುಗೆಗಳನ್ನು ಘೋಷಿಸಿದ್ದಾರೆ.

ಹಿಂದುಳಿದ ವರ್ಗದವರಿಗೆ ನೀಡಲಾಗುವ ಶೈಕ್ಷಣಿಕ ಮೀಸಲಾತಿಯನ್ನು ಮರಾಠಿಗರಿಗೂ ನೀಡಲಾಗುವುದು. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಮರಾಠ ಹಾಸ್ಟೆಲ್ ನಿರ್ಮಾಣಕ್ಕೆ ಜಾಗ ಹಾಗೂ 5 ಕೋಟಿ ರೂ. ಅನುದಾನ ನೀಡುವುದಾಗಿ ಪ್ರಕಟಿಸಿದ್ದಾರೆ.

ಮರಾಠಿಗರಿಗೆ ಮೀಸಲು ನೀಡುವ ಕುರಿತಾಗಿ ಈಗಾಗಲೇ ಅಧ್ಯಯನ ಸಮಿತಿ ರಚಿಸಿದ್ದು, ಸಮಿತಿ ವರದಿ ನೀಡಿದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮುಂಬೈನಲ್ಲಿ ಮರಾಠ ಮೀಸಲಾತಿಗೆ ಆಗ್ರಹಿಸಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದರು. ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಲಕ್ಷಾಂತರ ಜನ ರಸ್ತೆಗೆ ಇಳಿದ ಕಾರಣ ಪ್ರಮುಖ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿ, ಹಲವು ಮಾರ್ಗಗಳ ಸಂಚಾರವನ್ನು ಬದಲಿಸಲಾಗಿತ್ತು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಲಕ್ಷಾಂತರ ಮರಾಠಿಗರು ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನೆಗೆ ಸ್ಪಂದಿಸಿದ ಸಿ.ಎಂ. ಹಲವು ಕೊಡುಗೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...