alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಿವುಡ್ ಸಿನಿಮಾ ಶೈಲಿಯಲ್ಲಿ ಪ್ರತಿಭಟಿಸಿದ ಗ್ರಾಮಸ್ಥರು

images-cms-image-000014426

ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಈಗ ಭೀಕರ ಬರಗಾಲ ತಲೆದೋರಿದೆ. ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲಾಗದೇ ಸಾಲದ ಸುಳಿಗೆ ಸಿಕ್ಕ ಹಲವಾರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಬಾಲಿವುಡ್ ಸಿನಿಮಾ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬಾಲಿವುಡ್ ಚಿತ್ರರಂಗದಲ್ಲಿ ಇತಿಹಾಸ ಬರೆದಿರುವ ಅಮಿತಾಭ್ ಬಚ್ಚನ್, ಧರ್ಮೇಂದ್ರ, ಹೇಮಾ ಮಾಲಿನಿ, ಜಯಾ ಬಾಧುರಿ ಅಭಿನಯದ ‘ಶೋಲೆ’ ಚಿತ್ರದಲ್ಲಿ ಧರ್ಮೇಂದ್ರ, ಹೇಮಾಮಾಲಿನಿಯ ಪ್ರೀತಿಯನ್ನು ಪಡೆಯಲು ಟ್ಯಾಂಕ್ ಮೇಲೆ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಕೊನೆಗೂ ಪ್ರೀತಿ ಪಡೆದುಕೊಳ್ಳಲು ಸಫಲರಾಗುತ್ತಾರೆ.

ಅದೇ ರೀತಿ ಮರಾಠವಾಡಾದ ಔರಂಗಬಾದ್ ಜಿಲ್ಲೆಯ ಕೆಲ ಗ್ರಾಮಸ್ಥರು ಟ್ಯಾಂಕ್ ಮೇಲೆ ಏರಿ ಪ್ರತಿಭಟನೆ ನಡೆಸಿದ್ದು, ಜೈಕ್ವಾಡಿ ಜಲಾಶಯದಿಂದ ಕೂಡಲೇ ನೀರು ಬಿಡುವಂತೆ ಆಗ್ರಹಿಸಿದ್ದಾರೆ. ಆದರೆ ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗದಿರುವ ಕಾರಣ ಅಧಿಕಾರಿಗಳು ಅಸಹಾಯಕತೆ ತೋರ್ಪಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಬರುವ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

Related News

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...