alex Certify
ಕನ್ನಡ ದುನಿಯಾ       Mobile App
       

Kannada Duniya

ನೋಡ ನೋಡುತ್ತಿದ್ದಂತೆಯೇ ಕುಸಿದುಬಿತ್ತು ಗುಡ್ಡ

ಶಿಮ್ಲಾ: ಹಿಮಾಚಲ ಪ್ರದೇಶದಿಂದ ಪಠಾಣ್‌ಕೋಟ್‌ ಹಾಗೂ ದಾಲ್‌ಹೌಸಿಯನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಟ್ರಕ್‌ ಒಂದು ಮಣ್ಣಿನಡಿಯಲ್ಲಿ ಸಿಲುಕಿದೆ.

ಕಲ್ಲು ಬಂಡೆಗಳು ಹೆದ್ದಾರಿಗೆ ಉರುಳಿ, ಟ್ರಕ್‌ ಒಂದರ ಮೇಲೆ ಬೀಳುತ್ತಿರುವ ದೃಶ್ಯ ಪ್ರತ್ಯಕ್ಷದರ್ಶಿಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶದ ಉತ್ತರ ಭಾಗದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹಲವೆಡೆ ಭೂಕುಸಿತ ಸಂಭವಿಸಿದೆ.

ಚಂಬಾ- ಪಠಾಣ್‌ಕೋಟ್‌ ಹೆದ್ದಾರಿ ಸಂಚಾರ ಬಂದ್‌ ಮಾಡಲಾಗಿದೆ. ಚಂಬಾದ ದೊನಲಿಯಾದಲ್ಲಿ ವ್ಯಾಪಕ ಗುಡ್ಡ ಕುಸಿದಿದೆ. ಈ ವೇಳೆ ಟ್ರಕ್‌ ಒಂದು ಮಣ್ಣಿನಡಿ ಸಿಲುಕಿದ್ದು, ಅದೃಷ್ಟವಷಾತ್‌ ಯಾರಿಗೂ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಛಂಡೀಗಡ – ಮನಾಲಿ ರಾಷ್ಟ್ರೀಯ ಹೆದ್ದಾರಿಗೆ ಭೂ ಕುಸಿತದಿಂದ ಸಾಕಷ್ಟು ಸಮಸ್ಯೆಯಾಗಿದೆ. ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ವಿವಿಧ ಭಾಗದಲ್ಲಿ ರಸ್ತೆಗೆ ಮಣ್ಣು ಬಿದ್ದಿದ್ದು, ತೆರವು ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಕೆಲ ಭಾಗಗಳಲ್ಲಿ ಹಗುರ ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಕಳುಹಿಸಲಾಗಿದೆ.

ಹವಾಮಾನ ಇಲಾಖೆ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ, ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಈ ಬಾರಿಯ ಮುಂಗಾರಿನಲ್ಲಿ ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ರಾಜ್ಯಕ್ಕೆ 990 ಕೋಟಿ ರೂ. ನಷ್ಟ ಉಂಟಾಗಿದೆ. 35ಮಂದಿ ಜೀವ ಕಳೆದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...