alex Certify
ಕನ್ನಡ ದುನಿಯಾ       Mobile App
       

Kannada Duniya

ಮಥುರಾ ಹೊತ್ತಿ ಉರಿಯುವಾಗ ಫೋಟೋ ಶೂಟ್ ನಲ್ಲಿದ್ದ ನಟಿ

hema-malini

ಮಥುರಾ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಮತ್ತೆ ಹದಗೆಟ್ಟಿದೆ. ಒತ್ತುವರಿದಾರರನ್ನು ತೆರವುಗೊಳಿಸುವ ವೇಳೆ ನಡೆದ ಹಿಂಸಾಚಾರದಲ್ಲಿ, ಮಥುರಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ಹಾಗೂ 24 ಮಂದಿ ಸಾವು ಕಂಡ ಘಟನೆ ಮಥುರಾದಲ್ಲಿ ನಡೆದಿದೆ.

ಆಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂಘಟನೆಯ ಕಾರ್ಯಕರ್ತರು, ಜವಾಹರ್ ಭಾಗ್ ಪ್ರದೇಶವನ್ನು ಅತಿಕ್ರಮಣ ಮಾಡಿಕೊಂಡಿದ್ದು, ಅಲಹಾಬಾದ್ ಹೈಕೋರ್ಟ್ ಸೂಚನೆಯಂತೆ ಪೊಲೀಸ್ ಇಲಾಖೆ ಬಂದೋಬಸ್ತ್ ನಲ್ಲಿ ತೆರವು ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ಉಂಟಾದ ಹಿಂಸಾಚಾರದಲ್ಲಿ 24 ಮಂದಿ ಸಾವನ್ನಪ್ಪಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ಮೃತ ಕುಟುಂಬದವರಿಗೆ ಪರಿಹಾರ ಘೋಷಿಸಿದ್ದಾರೆ.

ಹೀಗೆ ಮಥುರಾದಲ್ಲಿ ವ್ಯಾಪಕ ಹಿಂಸಾಚಾರ ನಡೆದು, ಜನ ತತ್ತರಿಸಿರುವಾಗಲೇ, ಇಲ್ಲಿನ ಸಂಸದರಾದ ನಟಿ ಹೇಮಾಮಾಲಿನಿ ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಫೋಟೋ ಶೂಟ್ ನಲ್ಲಿ ಪಾಲ್ಗೊಂಡಿದ್ದ ಫೋಟೋಗಳನ್ನು ಅಪ್ ಲೋಡ್ ಮಾಡುವಲ್ಲಿ ಬ್ಯುಸಿಯಾಗಿದ್ದರು.

ಇದಕ್ಕೆ ಸ್ವಪಕ್ಷೀಯರು ಸೇರಿದಂತೆ ಬಹುತೇಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಿಂಸಾಚಾರದ ವೇಳೆ ಸಂತ್ರಸ್ಥರನ್ನು ಭೇಟಿ ಮಾಡದೇ ಫೋಟೋ ಅಪ್ ಲೋಡ್ ಮಾಡುವುದರಲ್ಲಿ ಹೇಮಾ ಮಾಲಿನಿ ಬ್ಯುಸಿಯಾಗಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ತಮ್ಮ ತಪ್ಪಿನ ಅರಿವಾಗುತ್ತಿದ್ದಂತೆ ಹೇಮಾಮಾಲಿನಿ, ಅಪ್ ಲೋಡ್ ಮಾಡಿದ್ದ ಫೋಟೋಗಳನ್ನು ತೆಗೆದು ಹಾಕಿದ್ದಾರೆ. ಇತ್ತ ಮಥುರಾದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮತ್ತೆ ಘರ್ಷಣೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೇಮಾ ಮಾಲಿನಿ ನಡೆ ರೋಮ್ ಹೊತ್ತಿ ಉರಿಯುವ ಸಂದರ್ಭದಲ್ಲಿ ದೊರೆ ಪಿಟೀಲು ಬಾರಿಸುತ್ತಿದ್ದ ಎಂಬ ಮಾತನ್ನು ನೆನಪಿಸುವಂತಿದೆ ಎಂದು ಹೇಳಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...