alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಗಿ ಕೃಪೆಯಿಂದ ಕ್ಲೀನ್ ಆಗ್ತಿದೆ ಸರ್ಕಾರಿ ಕಚೇರಿ

chanderkala

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತ್ರ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪೊಲೀಸ್ ಇಲಾಖೆ, ಶಾಲೆ ನಂತ್ರ ಸರ್ಕಾರಿ ಇಲಾಖೆಗಳ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಡುವಂತೆ ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಿಎಂ ಯೋಗಿ ಆದೇಶದ ನಂತ್ರ ಖುರ್ಚಿ ಮೇಲೆ ಕುಳಿತು ಪೆನ್ ಹಿಡಿಯುತ್ತಿದ್ದ ಅಧಿಕಾರಿಗಳ ಕೈಗೆ ಪೊರಕೆ ಬಂದಿದೆ. ಮೀರತ್ ನಲ್ಲಿ ಡಿಎಂ ಬಿ. ಚಂದ್ರಕಲಾ ತಮ್ಮ ಕಚೇರಿ ಸುತ್ತಮುತ್ತ ಸ್ವಚ್ಛತಾ ಕಾರ್ಯಕೈಗೊಂಡಿದ್ದಾರೆ. ಇದ್ರ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ಯೋಗಿ ನಿರ್ದೇಶನದ ಮೇರೆಗೆ ಎಲ್ಲ ಜಿಲ್ಲೆಗಳ ಅಧಿಕಾರಿಗಳು ಸರ್ಕಾರಿ ಕಚೇರಿ ಸ್ವಚ್ಛಗೊಳಿಸಿದ್ದಾರೆ. ಕಚೇರಿ ಸಿಬ್ಬಂದಿ ನೈರ್ಮಲ್ಯದ ಶಪಥ ಮಾಡಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...