alex Certify
ಕನ್ನಡ ದುನಿಯಾ       Mobile App
       

Kannada Duniya

ಜಮ್ಮು ಮತ್ತು ಕಾಶ್ಮೀರದಲ್ಲಿನ್ನು ಮಹಿಳಾ ಸಿಎಂ ಆಡಳಿತ

mehbooba-mufti-759

ಜಮ್ಮು ಮತ್ತು ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಆ ಮೂಲಕ ಹಲವು ತಿಂಗಳಿನಿಂದ ಉಂಟಾಗಿದ್ದ ರಾಜಕೀಯ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.

ರಾಜಭವನದಲ್ಲಿ ಸೋಮವಾರ ಬೆಳಿಗ್ಗೆ ರಾಜ್ಯಪಾಲ ಎನ್.ಎನ್.ವೋಹ್ರಾ ಅವರು ಮೆಹಬೂಬಾ ಮುಫ್ತಿ ಹಾಗೂ ಇನ್ನಿತರ ಸಂಪುಟ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಮಯದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಬಿಜೆಪಿಯ ನಿರ್ಮಲ್ ಸಿಂಗ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸಮಾರಂಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರೆ, ಕಾಂಗ್ರೆಸ್ ಪಕ್ಷ ಸಮಾರಂಭದಿಂದ ಹೊರಗುಳಿದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...