alex Certify
ಕನ್ನಡ ದುನಿಯಾ       Mobile App
       

Kannada Duniya

ಅರೆಬೆತ್ತಲೆಗೊಳಿಸಿ ಹಿಂಸೆ, ವಿಡಿಯೋ ವೈರಲ್

ಮೊರಾದಾಬಾದ್(ಉತ್ತರ ಪ್ರದೇಶ): ಬಯಲು ಶೌಚಕ್ಕೆ ಹೋಗದಂತೆ ಎಷ್ಟೆಲ್ಲಾ ತಿಳಿವಳಿಕೆ ನೀಡಿದರೂ, ಅನೇಕರು ಇನ್ನೂ ಬಿಟ್ಟಿಲ್ಲ. ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ ಬಯಲಲ್ಲಿ ಬಹಿರ್ದೆಸೆಗೆ ಹೋದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಲಾಗಿದೆ.

ನದಿಯ ದಂಡೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದ್ದು, ಯಾರೂ ಬಯಲು ಶೌಚಕ್ಕೆ ಹೋಗದಂತೆ ತಾಕೀತು ಮಾಡಲಾಗಿದೆ. ಹೀಗಿದ್ದರೂ, ಯುವಕನೊಬ್ಬ ಬಯಲು ಶೌಚಕ್ಕೆ ಹೋಗಿದ್ದನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವಕನನ್ನು ಅರೆಬೆತ್ತಲೆಗೊಳಿಸಿ ಥಳಿಸಿ ವಿಡಿಯೋ ಮಾಡಿದ್ದಾರೆ.

ಯುವಕನನ್ನು ಥಳಿಸಿದ ವಿಡಿಯೋ ವೈರಲ್ ಆಗಿದ್ದು, ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಚ್ಛತೆ ಹೆಸರಲ್ಲಿ ಹಲ್ಲೆ ನಡೆಸಿದ ಕಾರಣಕ್ಕೆ ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾಗಿರುವ ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...