alex Certify
ಕನ್ನಡ ದುನಿಯಾ       Mobile App
       

Kannada Duniya

ಹಿರಿಯ ಪೊಲೀಸ್ ಅಧಿಕಾರಿ ಮನೆ ಬಳಿ ಮಧ್ಯರಾತ್ರಿ ನಡೆದಿದೆ ಹೈಡ್ರಾಮಾ

16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಬುಧವಾರ ಮಧ್ಯ ರಾತ್ರಿ ಲಕ್ನೋದ ಹಿರಿಯ ಪೊಲೀಸ್ ಅಧಿಕಾರಿ ನಿವಾಸದ ಬಳಿ ಹೈಡ್ರಾಮಾ ನಡೆಸಿದ್ದಾರೆ.

ತಮ್ಮ 100 ಕ್ಕೂ ಅಧಿಕ ಬೆಂಬಲಿಗರೊಂದಿಗೆ ಸುಮಾರು 20 ವಾಹನಗಳಲ್ಲಿ ಬಂದಿಳಿದ ಕುಲದೀಪ್ ಸಿಂಗ್, ತಾವು ಶರಣಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಮಾಧ್ಯಮ ಪ್ರತಿನಿಧಿಗಳು ಪೊಲೀಸ್ ಅಧಿಕಾರಿ ಮನೆ ಮುಂದೆ ನೆರೆದಿದ್ದಾರೆಂಬ ಕಾರಣಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಬಂಧನದಿಂದ ಬಚಾವಾಗಲು ತಲೆಮರೆಸಿಕೊಂಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಈ ಸಂದರ್ಭದಲ್ಲಿ ಅವರನ್ನು ಬಂಧಿಸಲು ಮುಂದಾಗಿಲ್ಲ.

ಈ ಮಧ್ಯೆ ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, ದಾಖಲೆಗಳನ್ನು ಹಸ್ತಾಂತರಿಸುವಂತೆ ಪೊಲೀಸರಿಗೆ ಸೂಚಿಸಿದೆ. ಸಂತ್ರಸ್ಥೆ ತಂದೆಯನ್ನು ಥಳಿಸಿ ಅವರ ಸಾವಿಗೆ ಕಾರಣವಾದ ಹಿನ್ನಲೆಯಲ್ಲಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಸಹೋದರನನ್ನು ಈಗಾಗಲೇ ಬಂಧಿಸಲಾಗಿದೆ. ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ರಾಷ್ಟ್ರ ಮಟ್ಟದಲ್ಲೂ ಸುದ್ದಿಯಾಗುತ್ತಿದ್ದಂತೆ ಮುಜುಗರದಿಂದ ತಪ್ಪಿಸಿಕೊಳ್ಳಲು ಸಿಬಿಐಗೆ ಪ್ರಕರಣವನ್ನು ಒಪ್ಪಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...