alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ಕ್ಲಿಕ್ಕಿಸಿಕೊಂಡು ಶೂಟ್‍ ಮಾಡಿಕೊಂಡ ಪ್ರೇಮಿಗಳು

ಪ್ರೇಮಿಗಳಿಬ್ಬರು ಸಾವಿಗೂ ಮುನ್ನ ಸೆಲ್ಫಿ ಕ್ಲಿಕ್ಕಿಸಿಕೊಂಡು ನಂತರ ಒಬ್ಬರಿಗೊಬ್ಬರು ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ.

ವಿವಾಹಿತ ಮಹಿಳೆ ಅಂಜು ಸುತಾರ್ ಹಾಗೂ ಶಮ್ಕರ್ ಚೌಧರಿ ಆತ್ಮಹತ್ಯೆಗೆ ಶರಣಾದವರು. 21 ವರ್ಷದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಪೋಷಕರು ಒತ್ತಾಯ ಮಾಡಿ ಅಂಜುಗೆ ಮದುವೆ ಮಾಡಿದ್ರು. ಇದ್ರಿಂದ ಮನನೊಂದು ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ನಾಡ ಪಿಸ್ತೂಲ್‍ ಗಳ ಜೊತೆಗೆ ಪೊಲೀಸರು ಮೊಬೈಲ್‍ ವಶಪಡಿಸಿಕೊಂಡಿದ್ದಾರೆ. ಈ ಮೊಬೈಲ್‍ ನ ಆಡಿಯೋ ಕ್ಲಿಪ್‍ನಲ್ಲಿ ಪ್ರೇಮ ವೈಫಲ್ಯದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಪ್ರೇಮಿಗಳು ಹೇಳಿದ್ದಾರೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಮುಂದುವರೆಯಲಿದೆಯಾ ದೋಸ್ತಿ ಸರ್ಕಾರ...?

    View Results

    Loading ... Loading ...