alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿನಲ್ಲೇ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಹಾಗೂ ಯುವತಿ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಮಹಾರಾಷ್ಟ್ರದ ಮುಂಬೈ ನಗರದ ಮುಳುಂದ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಗೆ ನಿಂತಿದ್ದ ಕಾರಿನಲ್ಲಿ ಇಬ್ಬರ ಮೃತ ದೇಹಗಳು ಸಿಕ್ಕಿವೆ.

ಕಾರಿನಲ್ಲಿ ವಿಷದ ಬಾಟಲ್ ಗಳು ಸಿಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದ ಇವರುಗಳು ತಮ್ಮ ವಿವಾಹಕ್ಕೆ ಹಿರಿಯರ ಒಪ್ಪಿಗೆ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿರಬಹುದೆಂದು ಶಂಕಿಸಲಾಗಿದೆ.

ಮೃತ ಯುವಕ ಸಲ್ಮಾನ್ ಅಫ್ರೋಜ್ ಖಾನ್ (26) ಗಾರ್ಮೆಂಟ್ಸ್ ವ್ಯವಹಾರ ಮಾಡುತ್ತಿದ್ದರೆ ಯುವತಿ ಮನಿಷಾ ನಾರಾಯಣ್ ನೇಗಿ (21) ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...