alex Certify
ಕನ್ನಡ ದುನಿಯಾ       Mobile App
       

Kannada Duniya

ಹತ್ಯೆ ಮಾಡಿದವನನ್ನು ಮಹಡಿಯಿಂದ ತಳ್ಳಿದ ಸಾರ್ವಜನಿಕರು

ಬಿಹಾರದ ನಳಂದ ಪ್ರಾಂತ್ಯದಲ್ಲಿ ಯುವಕನನ್ನು ಹತ್ಯೆ ಮಾಡಿದ ವ್ಯಕ್ತಿಯನ್ನು ಜನರು, ಒಂದನೇ ಮಹಡಿಯ ಬಾಲ್ಕನಿಯಿಂದ ತಳ್ಳಿದ್ದಾರೆ.

ಬಾಲ್ಕನಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೂ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ, 6 ಪೊಲೀಸರು ಹಾಗೂ 11 ಮಂದಿ ಪತ್ರಕರ್ತರಿಗೆ ಗಾಯಗಳಾಗಿವೆ.

ಸದ್ಯ ಈ ವಿಡಿಯೋ ವೈರಲ್ ಆಗಿದೆ. ಈ ದೃಶ್ಯದಲ್ಲಿ ಕಾಣುವಂತೆ ಆಕ್ರೋಶಿತ ಜನ, ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೆ ಆರಕ್ಕೂ ಹೆಚ್ಚು ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಸ್ಥಳೀಯ ಎಸ್ ಪಿ ಹೇಳುವಂತೆ, ಬಾಲ್ಕನಿಯಿಂದ ವ್ಯಕ್ತಿಯನ್ನು ತಡೆಯಲು ಹೋದ ಪೊಲೀಸನನ್ನೂ ಸಹ ನೂಕಿದ್ದಾರೆ.

ಘಟನೆ ಹಿನ್ನೆಲೆ: ದಿವಾಕರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಒಬ್ಬ ಗುಂಡಿಟ್ಟು ಕೊಲೆ ಮಾಡಿ. ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಅವನು ಒಂದು ಮನೆಯಲ್ಲಿ ಅವಿತು ಕುಳಿತುಕೊಂಡಿದ್ದ. ಇದನ್ನು ಕಂಡ ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...