alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸಂಪುಟ ಪುನಾರಚನೆಗೆ ಪ್ರಧಾನಿ ಮೋದಿ ಸಿದ್ಧತೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸಚಿವ ಸಂಪುಟವನ್ನು ಪುನಾರಚಿಸುವ ಮೂಲಕ ಮಿತ್ರ ಪಕ್ಷಗಳ ಮನವೊಲಿಸಲು ಮುಂದಾಗಿದ್ದಾರೆನ್ನಲಾಗಿದೆ.

ಪ್ರಾರಂಭದಲ್ಲಿ ಬೆಂಬಲಕ್ಕೆ ನಿಂತಿದ್ದ ಕೆಲ ಪಕ್ಷಗಳು ಎನ್ ಡಿ ಎ ಮೈತ್ರಿ ಕೂಟದಿಂದ ಹಿಂದೆ ಸರಿದಿರುವುದು ಹಾಗೂ ಪ್ರತಿಪಕ್ಷಗಳು ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುವ ಮಾತುಗಳನ್ನಾಡುತ್ತಿರುವ ಕಾರಣ ಇದಕ್ಕೆ ಪ್ರತಿತಂತ್ರ ರೂಪಿಸಲು ಮಿತ್ರ ಪಕ್ಷಗಳ ಸದಸ್ಯರಿಗೆ ಮಂತ್ರಿ ಸ್ಥಾನ ನೀಡುವುದು ಹಾಗೂ ಬಿಜೆಪಿಯ ಕೆಲ ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸುವುದು ಪ್ರಧಾನಿ ಮೋದಿಯವರ ಉದ್ದೇಶವೆಂದು ಹೇಳಲಾಗಿದೆ.

2019 ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಮಿತ್ರ ಪಕ್ಷವಾಗಿದ್ದ ಶಿವಸೇನೆ ತಾನು ಪ್ರತ್ಯೇಕವಾಗಿ ಸ್ಪರ್ಧಿಸುವುದಾಗಿ ಹೇಳಿರುವುದು ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆಯವರ ಮನವೊಲಿಸಲು ಅಮಿತ್ ಷಾ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಈ ಎಲ್ಲಾ ಕಾರಣದಿಂದ ಸಚಿವ ಸಂಪುಟವನ್ನು ಪುನಾರಚಿಸುವ ಮೂಲಕ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಪ್ರಧಾನಿಯವರು ಕಾರ್ಯಪ್ರವೃತ್ತರಾಗಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...