alex Certify
ಕನ್ನಡ ದುನಿಯಾ       Mobile App
       

Kannada Duniya

ಖುರ್ಚಿ ಕಳೆದುಕೊಳ್ಳಲಿದ್ದಾರೆ ಕೆಲಸ ಮಾಡದ ಕೇಂದ್ರ ಮಂತ್ರಿಗಳು

modia_1501489157_618x347

ನರೇಂದ್ರ ಮೋದಿ ಸರ್ಕಾರದ ಕ್ಯಾಬಿನೆಟ್ ನಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಸಂಬಂಧ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದಾರೆ. ಆಗಸ್ಟ್ 18ರ ಆಸುಪಾಸು ಸಂಪುಟ ಪುನಾರಚನೆ ಮಾಡುವ ಸಾಧ್ಯತೆಯಿದೆ ಎನ್ನಲಾಗ್ತಾಯಿದೆ.

ಮೂಲಗಳ ಪ್ರಕಾರ, ರಕ್ಷಣಾ ಸಚಿವಾಲಯ ಸೇರಿದಂತೆ ನಾಲ್ಕು ಮುಖ್ಯ ಸಚಿವಾಲಯಗಳಲ್ಲೂ ಬದಲಾವಣೆಯಾಗುವ ಸಾಧ್ಯತೆಯಿದೆ. ಕೆಲಸ ಮಾಡದ ಮಂತ್ರಿಗಳು ಪಟ್ಟ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. 2019ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟ ಪುನಾರಚನೆ ನಡೆಯಲಿದೆ.

ರಾಜ್ಯಸಭೆಗೆ ಎಂಟ್ರಿಯಾಗ್ತಿರುವ ಅಮಿತ್ ಶಾ, ಮೋದಿ ಟೀಂನಲ್ಲಿ ಮಹತ್ವದ ಪಟ್ಟ ಪಡೆಯಲಿದ್ದಾರೆ ಎನ್ನಲಾಗ್ತಿದೆ. ಆದ್ರೆ ಅಮಿತ್ ಶಾ ಇದನ್ನು ತಳ್ಳಿ ಹಾಕಿದ್ದಾರೆ. ಅಧ್ಯಕ್ಷರ ಹುದ್ದೆ ತೃಪ್ತಿ ನೀಡಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...