alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಸಂಪುಟದಲ್ಲಿ ಹೊಸ ಮುಖಕ್ಕೆ ಅವಕಾಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶೀಘ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲಿದ್ದಾರೆ. ಶನಿವಾರ ಸಚಿವ ಸಂಪುಟ ಪುನಾರಚನೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದ್ರೀಗ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದೆ.

ಮೋದಿ ಸಚಿವ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಯಾಗಲಿದೆ. ವಿನಯ್ ಸಹಸ್ತ್ರಬುದ್ಧೆ, ಪ್ರಹ್ಲಾದ್ ಪಟೇಲ್, ಓಂ ಮಾಥೂರ್, ಪ್ರಹ್ಲಾದ್ ಜೋಶಿ ಮತ್ತು ಸತ್ಯಪಾಲ್ ಸಿಂಗ್ ಹೆಸರುಗಳು ಕೇಳಿ ಬಂದಿವೆ. ಮೂಲಗಳ ಪ್ರಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ವೃಂದದಲ್ಲಿದ್ದಾರೆ ಎನ್ನಲಾಗ್ತಿದೆ.

ಅಮಿತ್ ಶಾ ಶನಿವಾರ ರಾತ್ರಿ ದೆಹಲಿಗೆ ವಾಪಸ್ ಆಗಲಿದ್ದಾರೆ. ಶಾ ದೆಹಲಿಗೆ ಬಂದ ನಂತ್ರ ನರೇಂದ್ರ ಮೋದಿ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎನ್ನಲಾಗ್ತಿದೆ. ಬ್ರಿಕ್ಸ್ ಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಸೆಪ್ಟೆಂಬರ್ 3ರಂದು ಚೀನಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಹಾಗಾಗಿ ಮೋದಿ ಇದಕ್ಕೂ ಮೊದಲೇ ಸಂಪುಟ ಪುನಾರಚನೆ ಮಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...