alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿ ನನ್ನನ್ನು ಕೊಲ್ಲಿಸಬಹುದೆಂದ ಕೇಜ್ರಿವಾಲ್

arvind mn

ನವದೆಹಲಿ: ಆಮ್ ಆದ್ಮಿ ಪಕ್ಷದ ಏಳಿಗೆಯನ್ನು ಸಹಿಸದೇ ಕತ್ತಿ ಮಸೆಯುತ್ತಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ‘ದಮನ್ ಚಕ್ರ’ ಬಳಸುತ್ತಿದ್ದಾರೆ. ಅವರು ತಮ್ಮನ್ನು ಕೊಲೆ ಮಾಡಿಸುವ ಸಾಧ್ಯತೆಯೂ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್, ಪಕ್ಷದ ಯು ಟ್ಯೂಬ್ ಚಾನೆಲ್ ನಲ್ಲಿ ಈ ಕುರಿತು ಹೇಳಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ, ಆಮ್ ಆದ್ಮಿ ಪಾರ್ಟಿ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ. ಅವರು ನನ್ನನ್ನು ಕೊಲೆ ಮಾಡಿಸುವ ಸಾಧ್ಯತೆ ಇದೆ. ಅದೇ ರೀತಿ, ಪಕ್ಷದ ಸಚಿವರು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರನ್ನು ಕೂಡ ಕೊಲೆ ಮಾಡಿಸುವ ಸಾಧ್ಯತೆ ಇದ್ದು, ಎಲ್ಲರೂ ಬಲಿದಾನಕ್ಕೆ ಸಿದ್ಧರಾಗಿರಬೇಕೆಂದು ಹೇಳಿಕೆ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕರ ವಿರುದ್ಧ ವಿನಾಕಾರಣ ಕೇಸ್ ದಾಖಲಿಸಲಾಗುತ್ತಿದೆ. ಸಿ.ಬಿ.ಐ., ಭ್ರಷ್ಟಾಚಾರ ನಿಯಂತ್ರಣ ಘಟಕ ಹಾಗೂ ಆದಾಯ ತೆರಿಗೆ ಇಲಾಖೆಗಳನ್ನು ಆಮ್ ಆದ್ಮಿ ಪಕ್ಷದ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...