alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಜಂಟಿ ಕಾರ್ಯದರ್ಶಿಯಾಗಲು ಯುಪಿಎಸ್ಸಿ ಪಾಸ್ ಆಗ್ಬೇಕಿಲ್ಲ

ಮೋದಿ ಸರ್ಕಾರ ಅಧಿಕಾರಶಾಹಿಯಲ್ಲಿ ಸುಧಾರಣೆ ತರಲು ಮಹತ್ವದ ನಿರ್ಧಾರ ಕೈಗೊಂಡಿದೆ. ಆಡಳಿತದಲ್ಲಿ ನೇರವಾಗಿ ಪ್ರವೇಶ ಪಡೆಯಲು ದೊಡ್ಡ ಬದಲಾವಣೆ ಜಾರಿಗೆ ತಂದಿದೆ. ಇದ್ರ ಪ್ರಕಾರ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳದೆ ನೇರವಾಗಿ ಸರ್ಕಾರದ ಭಾಗವಾಗಬಹುದಾಗಿದೆ.

ಖಾಸಗಿ ಹಾಗೂ ಪಿಎಸ್ಯು ಕಂಪನಿಗಳಲ್ಲಿ ಕೆಲಸ ಮಾಡುವ ವೃತ್ತಿಪರರು ಸರ್ಕಾರದ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಬಹುದಾಗಿದೆ. 15 ವರ್ಷಗಳ ಉದ್ಯೋಗದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಸದ್ಯ ಜಂಟಿ ಕಾರ್ಯದರ್ಶಿಗಳ 10 ಹುದ್ದೆ ಖಾಲಿ ಇದ್ದು, ಇದಕ್ಕೆ ಅರ್ಜಿ ಕರೆಯಲಾಗಿದೆ.

ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಈ ಬಗ್ಗೆ ಟ್ವಿಟ್ ಮಾಡಿ ಮೋದಿ ಟೀಂ ಕೆಲಸವನ್ನು ಶ್ಲಾಘಿಸಿದ್ದಾರೆ. ಪ್ರತಿಭಾವಂತರಿಗೆ ಅವಕಾಶ ಸಿಗಲಿದ್ದು, ಆರ್ಥಿಕ ಸುಧಾರಣೆ ಯಶಸ್ಸಿಗೆ ಇಂಥ ವ್ಯಕ್ತಿಗಳ ಅವಶ್ಯಕತೆಯಿದೆ ಎಂದಿದ್ದಾರೆ.

ಈ ಹುದ್ದೆಗೆ ಯಾವುದೇ ವಯಸ್ಸಿನ ಮಿತಿ ಹೇಳಲಾಗಿಲ್ಲ. ಜುಲೈ 1,2018 ರಂತೆ ಕನಿಷ್ಠ 40 ವರ್ಷ ವಯಸ್ಸಾಗಿರಬೇಕು. ಕಡಿಮೆ ವಯಸ್ಸಿನ ಅರ್ಹ ಅಭ್ಯರ್ಥಿಗಳು ಕೂಡ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಜುಲೈ 30,2018 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. 15 ವರ್ಷ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕ್ಯಾಬಿನೆಟ್  ಕಾರ್ಯದರ್ಶಿ ನೇತೃತ್ವದ ಸಮಿತಿ ಅಭ್ಯರ್ಥಿಗಳ ಸಂದರ್ಶನ ನಡೆಸಲಿದೆ. ಆಯ್ಕೆಯಾದ ಅಭ್ಯರ್ಥಿಗಳು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಬೇಕಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...