alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯೋತ್ಸವ ಸಂಭ್ರಮದಲ್ಲಿರುವ ಕಾರ್ಯಕರ್ತರಿಗೆ ಅಭಿನಂದಿಸಿದ ಮೋದಿ

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಪಕ್ಷದ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ.

ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಮೊದಲಾದವರು ಮೋದಿ ಅವರನ್ನು ಬರ ಮಾಡಿಕೊಂಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮೋದಿ, ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಜಿ.ಎಸ್.ಟಿ.ಯಿಂದಾಗಿ ಬಿ.ಜೆ.ಪಿ.ಗೆ ಹಿನ್ನಡೆಯಾಗಲಿದೆ ಎಂದು ಕೆಲವರು ಹೇಳಿದ್ದರು. ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜನ ಬೆಂಬಲ ನೀಡಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಬೆಂಬಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಜನರ ಮನಸ್ಸಿನಲ್ಲಿ ಆಸೆ, ಅಪೇಕ್ಷೆಗಳಿರುತ್ತವೆ. ಅವರ ಆಶಯಕ್ಕೆ ವಿರುದ್ಧವಾದರೆ ಬೆಂಬಲಿಸುವುದಿಲ್ಲ. ನಾನು ಗುಜರಾತ್ ಬಿಟ್ಟು ಬಂದ ಮೇಲೆ ಹಿಂದೆ ಬಿದ್ದಿಲ್ಲ. ನಿರಂತರವಾಗಿ ಗುಜರಾತ್ ಚುನಾವಣೆಗಳಲ್ಲಿ ನಾವು ಗೆಲುವು ಕಂಡಿದ್ದೇವೆ. ವೈಯಕ್ತಿಕವಾಗಿ ನನಗೆ ಇದು ಖುಷಿ ಕೊಟ್ಟಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...