alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್ಲೆಡೆ 3 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

yoga

ನವದೆಹಲಿ: ವಿಶ್ವದೆಲ್ಲೆಡೆ ಇಂದು 3 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗಿದೆ. ಭಾರತ ಮಾತ್ರವಲ್ಲದೇ ವಿಶ್ವದ 180 ದೇಶಗಳಲ್ಲಿ ಯೋಗ ದಿನವನ್ನು ಆಚರಿಸಲಾಯಿತು.

ಉತ್ತರ ಪ್ರದೇಶ ರಾಜಧಾನಿ ಲಖ್ನೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದಾರೆ.

ಲಖ್ನೋದಲ್ಲಿ ಮಾತನಾಡಿದ ಮೋದಿ, ಯೋಗದಿಂದ ವಿಶ್ವವನ್ನು ಒಂದುಗೂಡಿಸಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಯೋಗಕ್ಕೆ ಮನ್ನಣೆ ಸಿಕ್ಕಿದ ದಿನ ಇದಾಗಿದೆ ಎಂದು ಹೇಳಿದ್ದಾರೆ.

ಯೋಗದಿಂದ ವಿಶ್ವ ನಮ್ಮ ಸಂಸ್ಕೃತಿಗೆ ಬೆಲೆ ಕೊಡುತ್ತಿದೆ. ಯೋಗ ಋಷಿ ಮುನಿಗಳ ತಪಸ್ಸಿನ ಫಲವಾಗಿದೆ. ವಿಶ್ವಕ್ಕೆ ಯೋಗವನ್ನು ಕಲಿಸಿಕೊಟ್ಟ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದಿದ್ದಾರೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ಯೋಗಗುರು ಬಾಬಾ ರಾಮ್ ದೇವ್ ನೇತೃತ್ವದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲಾದವರು ಭಾಗವಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...