alex Certify
ಕನ್ನಡ ದುನಿಯಾ       Mobile App
       

Kannada Duniya

‘ಅತ್ಯಾಚಾರದ ಪ್ರಕರಣ ದಾಖಲಿಸುವುದೇ ಈಕೆಯ ಕೆಲಸ’

ಮೊಹಾಲಿಯಲ್ಲಿ ಮಹಿಳೆಯೊಬ್ಬಳ ವಿರುದ್ದ ಬಡಾವಣೆಯೊಂದರ ನಿವಾಸಿಗಳು ತಿರುಗಿ ಬಿದ್ದಿದ್ದಾರೆ. ತನಗಾಗದವರ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸುವುದನ್ನೇ ಈ ಮಹಿಳೆ ಒಂದು ಕಾಯಕವನ್ನಾಗಿಸಿಕೊಂಡಿದ್ದು, ಇದರಿಂದ ನಮಗೆ ಸಾಕಾಗಿ ಹೋಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಅಲವತ್ತುಕೊಂಡಿದ್ದಾರೆ.

ಮೊಹಾಲಿಯ ಫೇಸ್ 10 ರಲ್ಲಿ ವಾಸಿಸುತ್ತಿರುವ 50 ವರ್ಷದ ಮಹಿಳೆ ಕಳೆದ ನಾಲ್ಕು ವರ್ಷಗಳಲ್ಲಿ ಸ್ಥಳೀಯ ನಿವಾಸಿಗಳ ವಿರುದ್ದ ಅತ್ಯಾಚಾರ ಸೇರಿದಂತೆ ಸುಮಾರು 30 ಪ್ರಕರಣಗಳನ್ನು ದಾಖಲಿಸಿರುವುದಾಗಿ ಬಡಾವಣೆ ನಿವಾಸಿಗಳ ಸಂಘದ ಅಧ್ಯಕ್ಷ ಹರ್ಕೇಶ್ ರಾಣಾ ಹೇಳಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ಈ ಹಿಂದೆ ಮಹಿಳೆ ವಿರುದ್ದ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದ ಪೊಲೀಸ್ ಅಧಿಕಾರಿಯ ವಿರುದ್ದವೂ ಈಕೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆನ್ನಲಾಗಿದೆ. ನೆರೆಮನೆಯ ನಿವಾಸಿಯೊಬ್ಬರು ತನ್ನೊಂದಿಗೆ ಜಗಳವಾಡಿದರೆಂಬ ಕಾರಣಕ್ಕೆ ಅವರ ಅಪ್ರಾಪ್ತ ಪುತ್ರನ ವಿರುದ್ದವೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಕಳೆದ 20 ವರ್ಷಗಳಿಂದ ಮಹಿಳೆ ಇದೇ ಏರಿಯಾದಲ್ಲಿ ವಾಸವಾಗಿದ್ದು, ಯಾರೊಂದಿಗೂ ಹೊಂದಿಕೊಂಡು ಹೋಗುತ್ತಿಲ್ಲವೆಂಬುದು ಇತರ ನಿವಾಸಿಗಳ ಆರೋಪವಾಗಿದೆ. ಈ ಹಿನ್ನಲೆಯಲ್ಲಿ ಬುಧವಾರ ಮಧ್ಯಾಹ್ನ ಸಿಲ್ವಿ ಪಾರ್ಕ್ ನಲ್ಲಿ ಪತ್ರಿಕಾಗೋಷ್ಟಿ ನಡೆಸಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ ನಿವಾಸಿಗಳು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...