alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲೇ ಅನಾಚಾರ

ttd-ttd

ತಿರುಪತಿ: ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುವ, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿ ತಿರುಮಲದಲ್ಲಿ ಭದ್ರತಾ ಸಿಬ್ಬಂದಿಗಳಿಂದಲೇ ಅನಾಚಾರ ನಡೆಯುತ್ತಿದೆ.

ಹೈ ಸೆಕ್ಯುರಿಟಿ ಇರುವ ಸನ್ನಿಧಾನದಲ್ಲಿ ಸೆಕ್ಯುರಿಟಿ ಗಾರ್ಡ್ ಗಳು ವ್ಯಾಪಾರಸ್ಥರಿಂದ ಹಣ ಪಡೆದುಕೊಳ್ಳುತ್ತಾರೆ. ರಥಬೀದಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಾರ ನಿಷೇಧಿಸಲಾಗಿದ್ದರೂ, ಅನೇಕರು ಇಲ್ಲಿಯೇ ವ್ಯಾಪಾರ ನಡೆಸುತ್ತಾರೆ. ಇಂತಹ ವ್ಯಾಪಾರಿಗಳಿಂದ ಭದ್ರತಾ ಸಿಬ್ಬಂದಿ ಹಣ ಪಡೆದುಕೊಳ್ಳುತ್ತಿದ್ದು, ವ್ಯಾಪಾರಿಗಳ ಸೋಗಿನಲ್ಲಿ ದುಷ್ಕರ್ಮಿಗಳು ಎಂಟ್ರಿ ಕೊಡುವ ಸಾಧ್ಯತೆ ಇದೆ.

ಮೊದಲೇ ಹೆಚ್ಚಿನ ಭದ್ರತೆ ಹೊಂದಿರುವ ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ಭೇಟಿ ಕೊಡುತ್ತಾರೆ. ಅವರಲ್ಲಿ ವ್ಯಾಪಾರಿಗಳ ವೇಷದಲ್ಲಿ ಬೇರೆಯವರೂ ದೇವಾಲಯದ ಸಮೀಪಕ್ಕೆ ಬರಬಹುದಾಗಿದೆ.

ಇದನ್ನು ನಿರ್ಲಕ್ಷಿಸಿದ ಭದ್ರತಾ ಸಿಬ್ಬಂದಿಯೇ ಸಣ್ಣಪುಟ್ಟ ವ್ಯಾಪಾರಿಗಳಿಂದ ಹಣ ಪಡೆದು, ನಿಷೇಧಿತ ಸ್ಥಳಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...