alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ ಇಲ್ಲಿದೆ ಉತ್ತಮ ಉದಾಹರಣೆ

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಕರ್ನಾಟಕದ ಕೊಡಗು ಹಾಗೂ ಕೇರಳ ರಾಜ್ಯ ನಲುಗಿ ಹೋಗಿದೆ. ಬಡವ-ಶ್ರೀಮಂತ, ಜಾತಿ-ಧರ್ಮ ಭೇದವಿಲ್ಲದೆ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರವಾಹ ಸಂತ್ರಸ್ತರ ನೆರವಿಗಾಗಿ ದೇಶದ ಜನತೆ ಟೊಂಕ ಕಟ್ಟಿ ನಿಂತಿದ್ದು, ಸಂಕಷ್ಟಕ್ಕೊಳಗಾದವರಿಗೆ ಸ್ಪಂದಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜಾತಿ-ಧರ್ಮ, ಬಡವ-ಶ್ರೀಮಂತ ಎಂಬುದಕ್ಕಿಂತ ಮಿಗಿಲಾಗಿ ಮಾನವೀಯತೆಯೇ ಮುಖ್ಯ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ. ಇದಕ್ಕೆ ಅತ್ಯುತ್ತಮವಾದ ಉದಾಹರಣೆಯೊಂದು ಇಲ್ಲಿದೆ.

ಕೇರಳದ ತ್ರಿಶೂರ್ ಜಿಲ್ಲೆಯ ಮಾಲ ಸಮೀಪದ ಇರುವತ್ತೂರಿನಲ್ಲಿ ಈ ಘಟನೆ ನಡೆದಿದ್ದು, ಮಸೀದಿಯಲ್ಲಿ ನೀರು ನಿಂತಿದ್ದ ಕಾರಣ ಈ ಬಾರಿ ಬಕ್ರೀದ್ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗದೆಂಬ ನಿರ್ಧಾರಕ್ಕೆ ಮುಸ್ಲಿಮರು ಬಂದಿದ್ದಾರೆ.

ಆದರೆ ಈ ಪರಿಸ್ಥಿತಿಯನ್ನು ಅರಿತ ಸ್ಥಳೀಯ ರಕ್ತೇಶ್ವರಿ ದೇವಾಲಯದ ಆಡಳಿತ ಮಂಡಳಿ, ಬಕ್ರೀದ್ ದಿನದಂದು ಮುಸ್ಲಿಂ ಬಾಂಧವರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಮಾಡಿಕೊಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...