alex Certify
ಕನ್ನಡ ದುನಿಯಾ       Mobile App
       

Kannada Duniya

ತಾಯಿ ಹೆಸರಿಗೆ ಕಳಂಕ ತಂದಿದ್ದಾಳೆ ಈ ಮಹಿಳೆ

kar-mahile-d

ಡುಮ್ಕಾ: ತಾಯಿಯೇ ತನ್ನಿಬ್ಬರು ಅವಳಿ ಮಕ್ಕಳನ್ನು ಬಾವಿಗೆ ನೂಕಿ ಕೊಲೆ ಮಾಡಿದ ಆಘಾತಕಾರಿ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

ಗರ್ಭಿಣಿಯಾಗಿದ್ದ ಸಂದರ್ಭದಲ್ಲೇ ಈಕೆ ಮಕ್ಕಳನ್ನು ಕೊಲೆ ಮಾಡಲು ಯತ್ನಿಸಿದ್ದಳು. ಮಾನಸಿಕ ಅಸ್ವಸ್ಥೆಯ ರೀತಿಯಲ್ಲಿ ನಟಿಸುತ್ತಿದ್ದ ಮಹಿಳೆ, 7 ತಿಂಗಳ ಅವಳಿ ಮಕ್ಕಳನ್ನು ಬಾವಿಗೆ ಹಾಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ, ಹೆಣ್ಣು ಮಕ್ಕಳ ತಲೆ ಕೂದಲು ಕತ್ತರಿಸುವವರು ಮಕ್ಕಳನ್ನು ಕೊಲೆ ಮಾಡಿದ್ದಾಗಿ ಹೇಳಿದ್ದಾಳೆ.

ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತಾನೇ ಮಕ್ಕಳನ್ನು ಬಾವಿಗೆ ಹಾಕಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...