alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ವಿಸ್ತರಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ತಮ್ಮ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದು, ಮೂವರು ಶಾಸಕರನ್ನು ನೂತನವಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಬಿಜೆಪಿ ಶಾಸಕರಾದ ಬಾಲಕೃಷ್ಣ ಪಾಟೀದಾರ್, ನಾರಾಯಣ ಸಿಂಗ್ ಖುಶ್ವಾ ಹಾಗೂ ಜಲಂಸಿಂಗ್ ಪಟೇಲ್ ನೂತನ ಸಚಿವರಾಗಿದ್ದು, ರಾಜಭವನದಲ್ಲಿ ಇಂದು ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ರಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹಾಗೂ ಅವರ ಸಚಿವ ಸಂಪುಟದ ಹಿರಿಯ ಸಚಿವರುಗಳು ಉಪಸ್ಥಿತರಿದ್ದರು.

ಈ ಮಧ್ಯೆ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಫೆಬ್ರವರಿ 24 ರಂದು ಉಪಚುನಾವಣೆ ನಿಗದಿಯಾಗಿರುವುದರಿಂದ ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಮಾಡಿರುವುದು ಸರಿಯಲ್ಲವೆಂದು ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...