alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಗೆ ಪತ್ರ ಬರೆದು ಫೇಸ್ ಬುಕ್ ನಲ್ಲಿ ಹಾಕಿದ ಪೇದೆ

MP constable

ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಜೀವನ ನಡೆಸುವುದು ಕಷ್ಟಸಾಧ್ಯ. ಅದರಲ್ಲಿಯೂ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡ, ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗಿದೆ. ಬರುವ ಅಲ್ಪವೇತನದಿಂದ ಸಂಸಾರ ನಡೆಸಲು ಸಾಧ್ಯವಾಗದ ಸ್ಥಿತಿ ಇದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಯೊಬ್ಬ ತಮಗೆ ನೀಡುತ್ತಿರುವ ವೇತನ ಸಾಕಾಗುತ್ತಿಲ್ಲ. ಕೂಡಲೇ ವೇತನವನ್ನು ಹೆಚ್ಚಿಸಬೇಕೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾನೆ. ಈಗ ಕೊಡುತ್ತಿರುವ ವೇತನದಲ್ಲಿ ಇಬ್ಬರನ್ನು ಸಾಕುವುದೇ ಕಷ್ಟವಾಗಿದೆ. ಸಂಸಾರ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ವೇತನ ಹೆಚ್ಚಳ ಮಾಡಿ ಎಂದು ಸಿಎಂಗೆ ಪತ್ರ ಬರೆದು, ಅದನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ.

ಬುರ್ಹಾನ್ ಪುರದ 28 ವರ್ಷದ ಪೊಲೀಸ್ ಪೇದೆ ಸೂರಜ್ ಸಿಂಗ್ ಹೀಗೆ ಪತ್ರ ಬರೆದವ. ಫೇಸ್ ಬುಕ್ ನಲ್ಲಿ ಈತ ಏಪ್ರಿಲ್ 21 ರಂದು ಪೋಸ್ಟ್ ಮಾಡಿದ್ದು, ಸಿಕ್ಕಾಪಟ್ಟೆ ರೆಸ್ಪಾನ್ಸ್ ಬಂದಿದೆ. ಇದು ಗಮನಕ್ಕೆ ಬಂದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು, ಕ್ರಮಕ್ಕೆ ಮುಂದಾಗಿದ್ದು, ಸಮಸ್ಯೆ ಇದ್ದರೆ, ಇಲಾಖೆಯಲ್ಲಿ ತಿಳಿಸಬೇಕೆಂದು ಹೇಳಿ, ಆತನ ವಿರುದ್ಧ ಶಿಸ್ತುಕ್ರಮಕ್ಕೆ ಮುಂದಾಗಿದ್ದಾರೆ.

 

 

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...