alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರು

animals

ಭೋಪಾಲ್: ಮಧ್ಯಪ್ರದೇಶದಲ್ಲಿ ವರುಣ ಅಬ್ಬರ ಜೋರಾಗಿದ್ದು, ಜನ ಹೈರಾಣಾಗಿದ್ದಾರೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಕೊಳ್ಳಗಳೆಲ್ಲಾ ಭರ್ತಿಯಾಗಿದ್ದು, ಪ್ರವಾಹ ಸ್ಥಿತಿ ಉಂಟಾಗಿದೆ. ಅಲ್ಲದೇ ಅಪಾರ ಸಾವು ನೋವು ಸಂಭವಿಸಿದೆ.

ಪ್ರವಾಹದಿಂದ ನಂದೂರ್ ಬಾರ್ ಜಿಲ್ಲೆಯಲ್ಲಿ ಭೂ ಕುಸಿತ ಉಂಟಾಗಿದೆ. ನಂದೂರ್ ಬಾರ್-ಸೂರತ್ ನಡುವಿನ ರೈಲು ಮಾರ್ಗದಲ್ಲಿ ಹಳಿಯ ಕೆಳಗಿನ ಮಣ್ಣು ಕುಸಿದು ರೈಲು ಅಪಘಾತ ಸಂಭವಿಸಿತ್ತು. ಇದಾದ ನಂತರ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರ ರದ್ದು ಪಡಿಸಲಾಗಿತ್ತು. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರವಾಹದಲ್ಲಿ ನೂರಾರು ಜಾನುವಾರುಗಳು ಕೊಚ್ಚಿ ಹೋಗಿವೆ. ಕೆಲವು ಕಡೆಗಳಲ್ಲಿ ಜನರೂ ಪ್ರವಾಹಕ್ಕೆ ಸಿಲುಕಿ ಜೀವ ಕಳೆದುಕೊಂಡಿದ್ದಾರೆ.

 ಏಕಾಏಕಿ ಪ್ರವಾಹ ಸ್ಥಿತಿ ಉಂಟಾಗಿ ಜಾನುವಾರು ಕೊಚ್ಚಿ ಹೋಗುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಂತಹವರ ಮನ ಕರಗಿಸುವಂತಿದೆ. ಜಾನುವಾರು ರಕ್ಷಣೆ ಸಾಧ್ಯವಾಗದೇ ಜನ ನಿಸ್ಸಹಾಯಕರಾಗಿದ್ದಾರೆ. ನಿರಂತರ ಮಳೆಯಿಂದಾಗಿ ಮಧ್ಯಪ್ರದೇಶದ ಹಲವು ಜಿಲ್ಲೆಗಳ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...