alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿ ಆತ್ಮಹತ್ಯೆಯಲ್ಲಿ ಪತಿ ಪ್ರೇಮಿ ವಿರುದ್ಧ ಕೇಸ್ ಸಾಧ್ಯವಿಲ್ಲ

ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಹೈಕೋರ್ಟ್ ಒಂದು ಮಹತ್ವದ ತೀರ್ಪು ನೀಡಿದೆ. ಪತಿಗೆ ವಿವಾಹೇತರ ಸಂಬಂಧವಿದೆ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರೆ ಪತಿ ಜೊತೆ ಸಂಬಂಧ ಹೊಂದಿದ್ದ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲು ಸಾಧ್ಯವಿಲ್ಲವೆಂದು ಕೋರ್ಟ್ ಹೇಳಿದೆ.

ಡಿಸೆಂಬರ್ 14, 2015 ರಂದು ಅವಿನಾಶ್ ಸಿಂಗ್ ಎಂಬಾತನ ಪತ್ನಿ ಪ್ರತಿಮಾ ಆತ್ಮಹತ್ಯೆ ಮಾಡಿಕೊಂಡಿದ್ದಳಂತೆ. ಸಾವಿಗೂ ಮುನ್ನ ಮಹಿಳೆ ಪತಿ ವಿರುದ್ಧ ಹೇಳಿಕೆ ನೀಡಿದ್ದಳು. ಪತಿ ವಿವಾಹೇತರ ಸಂಬಂಧ ಹೊಂದಿದ್ದ. ಇದೇ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ಆಕೆ ಹೇಳಿದ್ದಳು.

ಘಟನೆ ನಂತ್ರ ಪೊಲೀಸರು ಪತಿ ಹಾಗೂ ಪ್ರೇಮಿ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಗೆಳತಿ ವಿರುದ್ಧವೂ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸ್ಥಳೀಯ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಿಳೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಳು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮಹಿಳೆ ಹೆಸರನ್ನು ಜಾರ್ಜ್ ಶೀಟ್ ನಿಂದ ತೆಗೆಯುವಂತೆ ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...