alex Certify
ಕನ್ನಡ ದುನಿಯಾ       Mobile App
       

Kannada Duniya

ಶೌಚಾಲಯದಲ್ಲೇ ಮಕ್ಕಳಿಗೆ ಪಾಠ

sc-mp-tolt

ಭೋಪಾಲ್: ಒಂದು ಚಿತ್ರ ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರ ಮಾತ್ರ ಅದಕ್ಕಿಂತ ಹೆಚ್ಚಿನದನ್ನು ಹೇಳುವಂತಿದೆ.

ಶಿಕ್ಷಣಕ್ಕಾಗಿ ಸರ್ಕಾರಗಳು ಕೋಟ್ಯಂತರ ರೂಪಾಯಿಯನ್ನು ಖರ್ಚು ಮಾಡುತ್ತವೆ. ಆದರೆ, ಸದ್ಬಳಕೆಯಾಗಿದೆಯಾ ಎಂಬ ಪ್ರಶ್ನೆ ಕಾಡುತ್ತದೆ.

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ಕುಳಿತುಕೊಳ್ಳಲು ಕಟ್ಟಡವಿಲ್ಲದ ಕಾರಣ, ಶೌಚಾಲಯದಲ್ಲೇ ಪಾಠ ಕೇಳುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ನೀಮಚ್ ಜಿಲ್ಲೆಯ ಮೊಖಾಂಪುರ್ ಗ್ರಾಮದಲ್ಲಿ 2012 ರಲ್ಲಿ ಶಾಲೆಯನ್ನು ಆರಂಭಿಸಲಾಗಿದೆ. ಶಾಲೆಗೆ ಸ್ವಂತ ಕಟ್ಟಡವಿಲ್ಲದ ಕಾರಣ, ಬಾಡಿಗೆ ಕಟ್ಟಡದಲ್ಲಿ ತರಗತಿಗಳನ್ನು ನಡೆಸಲಾಗಿದೆ.

ಈಗ ಅದೂ ಇಲ್ಲದಂತಾಗಿದೆ. ಮಳೆ ಇಲ್ಲದ ವೇಳೆ ಮರದಡಿಯಲ್ಲಿ ತರಗತಿಗಳು ನಡೆಯುತ್ತವೆ. ಮಳೆಗಾಲದಲ್ಲಿ ಶೌಚಾಲಯದಲ್ಲೇ ಮಕ್ಕಳನ್ನು ಕೂರಿಸಿ ಪಾಠ ಮಾಡಬೇಕಾಗಿ ಬಂದಿದೆ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ.

ಈ ಕ್ಷೇತ್ರದ ಶಾಸಕ ಬಿ.ಜೆ.ಪಿ. ಕೈಲಾಶ್ ಚಾವ್ಲಾ ಶೌಚಾಲಯದಲ್ಲಿ ಮಕ್ಕಳು ಪಾಠ ಕೇಳುತ್ತಿರುವುದನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಪತ್ರ ಬರೆಯಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದೆಲ್ಲಾ ಏನೇ ಇರಲಿ, ಮಕ್ಕಳು ಮಾತ್ರ ಶೌಚಾಲಯದಲ್ಲಿ ಕುಳಿತು ಪಾಠ ಕೇಳುವಂತಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...