alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕೆ ಬಸ್ ಬಿದ್ದು 6 ಮಂದಿ ಸಾವು

bus-ss

ಜಬಲ್ಪುರ್: ನರ್ಮದಾ ಸೇವಾ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ ಕಂದಕಕ್ಕೆ ಬಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ.

ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಅಮರ್ ಕಂಟಕ್ ಸಮೀಪದ ಜೋಗಿ ಟಿಕಾರಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ಅಮರ್ ಕಂಟಕ್ ನಲ್ಲಿ ನಡೆದ ನರ್ಮದಾ ಸೇವಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸೇವಾ ಯಾತ್ರಿಗಳು ಜಬಲ್ಪುರಕ್ಕೆ ತೆರಳುತ್ತಿದ್ದರು.

ತಡರಾತ್ರಿ 40 ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಓಂ ಪ್ರಕಾಶ್ ದುರ್ವೆ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಮೃತರ ಕುಟುಂಬದವರಿಗೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...