alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳ ಆತ್ಮಹತ್ಯೆ ತಡೆಗೆ ಹೊಸ ಪ್ಲಾನ್….

yoga

ಹೆಚ್ಚುತ್ತಿರುವ ಮಕ್ಕಳ ಆತ್ಮಹತ್ಯೆ ತಡೆಗೆ ಮಧ್ಯಪ್ರದೇಶ ಸರ್ಕಾರ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗವನ್ನು ಶಾಲಾ ಪಠ್ಯದಲ್ಲಿ ಕಡ್ಡಾಯವಾಗಿ ಅಳವಡಿಸಲು ಮುಂದಾಗಿದೆ.

ಸದ್ಯ ದೈಹಿಕ ತರಬೇತಿ ಅವಧಿಯಲ್ಲಿ ಯೋಗ ಕಲಿಸುವಂತೆ ಶಿಕ್ಷಣ ಇಲಾಖೆ, ಎಲ್ಲಾ ಶಾಲೆಗಳ ಶಿಕ್ಷಕರಿಗೆ ಸೂಚಿಸಿದೆ. ಮುಂದಿನ ವರ್ಷದಿಂದ ಪ್ರತ್ಯೇಕ ಯೋಗ ತರಗತಿಯನ್ನೇ ಅಳವಡಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿನ ಒತ್ತಡ ಕಡಿಮೆ ಮಾಡುವುದು ಇದರ ಉದ್ದೇಶ. ಎನ್ ಸಿ ಆರ್ ಬಿ ಅಂಕಿ-ಅಂಶಗಳ ಪ್ರಕಾರ 2005-2014ರವರೆಗೆ ಮಧ್ಯಪ್ರದೇಶದಲ್ಲಿ ಮಕ್ಕಳ ಆತ್ಮಹತ್ಯೆ ಪ್ರಮಾಣ ಶೇ.240ರಷ್ಟು ಹೆಚ್ಚಾಗಿದೆ. ಈ ವರ್ಷ ಕೂಡ 45 ವಿದ್ಯಾರ್ಥಿಗಳು ಸಾವಿಗೆ ಶರಣಾಗಿದ್ದು, 15 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

2015 ರಲ್ಲಿ 625 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಎನ್ ಸಿ ಆರ್ ಬಿ ವರದಿಯಲ್ಲಿ ಹೇಳಲಾಗಿದೆ. ಮಕ್ಕಳ ಆತ್ಮಹತ್ಯೆಗೆ ಕಾರಣ ಮತ್ತು ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಮಿತಿಯೊಂದನ್ನು ನೇಮಿಸಲಾಗಿತ್ತು. ಸಮಿತಿ ವರದಿಯನ್ನೇನೋ ಸಲ್ಲಿಸಿದೆ, ಆದ್ರೆ ಮಕ್ಕಳ ಆತ್ಮಹತ್ಯೆ ತಡೆಗೆ ಮುಂದಾಗಿರುವ ಶಿಕ್ಷಣ ಇಲಾಖೆ ತಾನೇ ಖುದ್ದಾಗಿ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಭೋಪಾಲ್ ನಲ್ಲಿ ಎಲ್ಲ ಶಿಕ್ಷಕರಿಗೂ ಯೋಗ ತರಬೇತಿಯನ್ನು ನೀಡಲಾಗುತ್ತದೆ. ಬಳಿಕ ಪ್ರತಿನಿತ್ಯ ಮಕ್ಕಳಿಗೆ ಯೋಗ ತರಗತಿ ಕಡ್ಡಾಯ ಮಾಡಲಾಗುತ್ತದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...