alex Certify
ಕನ್ನಡ ದುನಿಯಾ       Mobile App
       

Kannada Duniya

ತಾರಕಕ್ಕೇರಿದ ಭಿನ್ನಮತ : ಅಖಿಲೇಶ್ ಗೆ ನೋಟಿಸ್

mulayam

ಲಖ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ. ಇದೇ ಸಂದರ್ಭದಲ್ಲಿ ಸಮಾಜವಾದಿ ಪಕ್ಷದಲ್ಲಿ ಭಿನ್ನಮತ ತಾರಕ್ಕೇರಿದೆ.

ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ.

ಮುಲಾಯಂ ಸಿಂಗ್ ಯಾದವ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಕ್ಕೆ ಪ್ರತಿಯಾಗಿ, ಅಖಿಲೇಶ್ ಯಾದವ್ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಅಖಿಲೇಶ್ ಗೆ ನೋಟಿಸ್ ನೀಡಿರುವ ಮುಲಾಯಂ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದ ರಾಮ್ ಗೋಪಾಲ್ ಯಾದವ್ ಅವರಿಗೆ ನೋಟಿಸ್ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...