alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾಮಳೆಗೆ ಮುಂಬೈನಲ್ಲಿ ಐದಂತಸ್ತಿನ ಕಟ್ಟಡ ಕುಸಿತ

ಮುಂಬೈ: ನಿರಂತರವಾಗಿ 2 ದಿನಗಳ ಕಾಲ ಸುರಿದ ಮಹಾಮಳೆಗೆ ತತ್ತರಿಸಿ ಹೋಗಿದ್ದ ಮುಂಬೈನಲ್ಲಿ ಪ್ರವಾಹ ಸ್ಥಿತಿ ಇಳಿಮುಖವಾಗಿದೆ.

ದಕ್ಷಿಣ ಮುಂಬೈನ ಜೆ.ಜೆ. ಜಂಕ್ಷನ್ ನಲ್ಲಿರುವ ಪಾಕ್ಮೊಡಿಯಾ ರಸ್ತೆಯಲ್ಲಿ 5 ಅಂತಸ್ತಿನ ಕಟ್ಟಡವೊಂದು ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದ ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರು ಸಾವನ್ನಪ್ಪಿದ್ದಾರೆ.

ಎನ್.ಡಿ.ಆರ್.ಎಫ್. ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಅವಶೇಷಗಳಡಿ 15 ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ಸಾಗಿದೆ. ಕಳೆದ 2 ದಿನಗಳ ಅವಧಿಯಲ್ಲಿ 2 ನೇ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

19 ಮಂದಿ ಸಾವು:

ಸೋಮವಾರ ಮತ್ತು ಮಂಗಳವಾರ ಸುರಿದ ಮಹಾಮಳೆಗೆ ಮುಂಬೈನಲ್ಲಿ 19 ಮಂದಿ ಬಲಿಯಾಗಿದ್ದಾರೆ. ಪ್ರವಾಹ ಸ್ಥಿತಿ ಇಳಿಮುಖವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...