alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಫೇಸ್‌ಬುಕ್‌ ಪೋಸ್ಟ್ ಗೆ ಕಾಂಗ್ರೆಸ್ ಮುಖಂಡನ ಕೊಲೆ?

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಅಸಲ್ಫಾ ಮೆಟ್ರೋ ನಿಲ್ದಾಣದಲ್ಲಿ 1.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು 45 ವರ್ಷದ ಮನೋಜ್ ದಾವೆ ಎಂದು ಗುರುತಿಸಲಾಗಿದೆ. ಸುಬರ್ಬನ್ ಘಾಟ್ ಕೊಪ್ಪರ್ ನ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿದ್ದ ಇವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಪೊಲೀಸರು ತನಿಖೆ ನಡೆಸಿದ್ದು, ಮೃತ ವ್ಯಕ್ತಿ ಕೆಲ‌ ದಿನಗಳ ‌ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕಿದ್ದರಿಂದ ಈ ಘಟನೆ ನಡೆದಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಆದರೆ ದುಬೇ ಅವರ ಸಂಬಂಧಿಗಳೊಬ್ಬರ ಪ್ರಕಾರ, 2019ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಬರೆದುಕೊಂಡಿದ್ದರು. ಇದಕ್ಕೆ ಬಿಜೆಪಿ ಹಾಗೂ ಬಜರಂಗ ದಳದ ಹಲವು ಕಾರ್ಯಕರ್ತರು ಅಕ್ಷೇಪಾರ್ಹ ಕಾಮೆಂಟ್ ಮಾಡಿದ್ದರು‌. ಆದ್ದರಿಂದ ಸಾಮಾಜಿಕ ಜಾಲತಾಣದ ಕೆಲವು ಪೋಸ್ಟ್ ಗಳು ಹತ್ಯೆಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...