alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಾರ್ಟ್ಮೆಂಟ್ ನಲ್ಲಿ ಬೆಂಕಿ: 16 ಕೋಟಿಗೆ ಮನೆ ಖರೀದಿ ಮಾಡಿದ್ದ ದೀಪಿಕಾ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಾಸವಿರುವ ಹೈ ರೈಸ್ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವರ್ಲಿ ಪ್ರದೇಶದಲ್ಲಿರುವ ಈ ಅಪಾರ್ಟ್ಮೆಂಟ್ ನ 33ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಎರಡ್ಮೂರು ಮಹಡಿಗೆ ಆವರಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ನಿರಂತರ ಪ್ರಯತ್ನ ನಡೆಸುತ್ತಿದೆ. ಬಿಲ್ಡಿಂಗ್ ನಲ್ಲಿದ್ದ 95 ಮಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಬೆಂಕಿಗೆ ಕಾರಣ ಈವರೆಗೂ ತಿಳಿದು ಬಂದಿಲ್ಲ. ಬಿಲ್ಡಿಂಗ್ ಹೆಸರು Beaumonde ಎನ್ನಲಾಗ್ತಿದೆ.

ಇದೇ ಬಿಲ್ಡಿಂಗ್ ನಲ್ಲಿ ನಟಿ ದೀಪಿಕಾ ಪಡುಕೋಣೆ ಮನೆಯಿದೆ. ದೀಪಿಕಾ 26ನೇ ಮಹಡಿಯಲ್ಲಿ ವಾಸವಾಗಿದ್ದಾರೆ. ದೀಪಿಕಾ 4 ಬೆಡ್ ರೂಮಿನ ಮನೆಯನ್ನು 2010 ರಲ್ಲಿ 16 ಕೋಟಿಗೆ ಖರೀದಿ ಮಾಡಿದ್ದರು. ಘಟನೆ ವೇಳೆ ದೀಪಿಕಾ ಮನೆಯಲ್ಲಿರಲಿಲ್ಲ. ಜಾಹೀರಾತಿನ ಶೂಟಿಂಗ್ ಗೆ ಹೊರಗೆ ಹೋಗಿದ್ದರು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...