alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಅಪ್ರಾಪ್ತೆ

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯೊಬ್ಬಳು ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ಘಟನೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿವೆ. ಮನಕಲಕುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆ ಮುಂಬೈನಲ್ಲಿ ನಡೆದಿದೆ. 12 ವರ್ಷದ ಬಾಲಕಿಯನ್ನು ನಂಬಿಸಿ ವ್ಯಕ್ತಿಯೊಬ್ಬ ನಿರ್ಮಾಣ ಹಂತದ ನಾಲ್ಕಂತಸ್ತಿನ ಕಟ್ಟಡಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡು ಬಂದ ಬಾಲಕಿ ಕಟ್ಟಡದಿಂದ ಕೆಳಗೆ ಧುಮುಕಿದ್ದಾಳೆ.

ಇದನ್ನು ನೋಡಿದ ಕಾರ್ಮಿಕರು ತಕ್ಷಣ ಅಲ್ಲಿಗೆ ಓಡಿ ಬಂದಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿ ಕೆಳಗೆ ಜಿಗಿದಿದ್ದಾಳೆ. ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...