alex Certify
ಕನ್ನಡ ದುನಿಯಾ       Mobile App
       

Kannada Duniya

ಐಸಿಯು ನಲ್ಲಿ ನಡೆದಿದೆ ಆಘಾತಕಾರಿ ಘಟನೆ

ಅಪಘಾತದಲ್ಲಿ ಗಾಯಗೊಂಡು ಕೋಮಾಕ್ಕೆ ಹೋಗಿದ್ದ ವ್ಯಕ್ತಿಯೊಬ್ಬನಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿರುವ ವೇಳೆ ಇಲಿ ಕಚ್ಚಿ ಆತ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

27 ವರ್ಷದ ಪರ್ಮಿಂದರ್ ಗುಪ್ತಾ ಎಂಬಾತ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಆತನನ್ನು ಥಾಣೆಯಲ್ಲಿರುವ ಸಿವಿಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಮಾಕ್ಕೆ ತಲುಪಿದ್ದ ಆತನನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಏಪ್ರಿಲ್ 23 ರಂದು ಪರ್ಮಿಂದರ್ ಕಣ್ಣು ಗುಡ್ಡೆಯ ಮೇಲೆ ಇಲಿಯೊಂದು ಕಚ್ಚಿದ್ದು, ಇದರಿಂದ ಆತ ಸಾವನ್ನಪ್ಪಿರುವುದಾಗಿ ಆತನ ಕುಟುಂಬ ಆರೋಪಿಸಿದೆ. ಆದರೆ ಆಸ್ಪತ್ರೆ ಸಿಬ್ಬಂದಿ ಈ ಆರೋಪವನ್ನು ನಿರಾಕರಿಸಿದ್ದಾರೆ. ಆತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದೆವು. ಆದರೆ ಪರ್ಮಿಂದರ್ ಕುಟುಂಬ ಇದನ್ನು ನಿರಾಕರಿಸಿತ್ತು ಎಂದು ಹೇಳಿದ್ದಾರೆ. ಅದಾಗ್ಯೂ ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...