alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ನ್ಯೂಸ್: ಮುಂಬೈನಿಂದ ಮತ್ತೊಂದು ಸಂದೇಶ ರವಾನಿಸಿದ ಅತೃಪ್ತ ಶಾಸಕರು

ಮುಂಬೈ: ನಾವು 12 ಶಾಸಕರು ಒಟ್ಟಾಗಿದ್ದೇವೆ. ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಮುಂಬೈನಲ್ಲಿರುವ ಬಂಡಾಯ ಶಾಸಕರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್, ಯಾವುದೇ ಒತ್ತಡಕ್ಕೆ ನಾವು ಮಣಿಯುವುದಿಲ್ಲ. ನಮ್ಮ ಮೇಲೆ ಯಾರ ಒತ್ತಡವೂ ಇಲ್ಲ. ನಾವು ಮಣಿಯುವುದೂ ಇಲ್ಲ. ನಮ್ಮಲ್ಲಿ ಗುಂಪುಗಾರಿಕೆ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂದು ತಿಳಿಸಿದ್ದಾರೆ.

ನಾವು ರಾಜೀನಾಮೆ ವಾಪಸ್ ಪಡೆಯುವುದಿಲ್ಲ. ಶಾಸಕ ಕೆ. ಸುಧಾಕರ್ ದೆಹಲಿಯಲ್ಲಿದ್ದಾರೆ. ಮನವೊಲಿಸಲು ಎಂಟಿಬಿ ನಾಗರಾಜ್ ಮುಂಬೈಗೆ ಬಂದಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಸೋಮಶೇಖರ್, ಎಂಟಿಬಿ ನಾಗರಾಜ್ ಕೂಡ ನಮ್ಮ ಜೊತೆಯಲ್ಲಿದ್ದಾರೆ. 12 ಶಾಸಕರು ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಒಡಕಿಲ್ಲ ಎಂದು ತಿಳಿಸಿದ್ದಾರೆ.

ಎಂಟಿಬಿ ನಾಗರಾಜ್ ರಾಜೀನಾಮೆ ವಾಪಸ್ ಪಡೆಯುವುದಿಲ್ಲ. ಯಾವುದೇ ಕಾರಣಕ್ಕೂ ನಾವೂ ರಾಜೀನಾಮೆ ವಾಪಸ್ ಪಡೆದುಕೊಳ್ಳುವುದಿಲ್ಲ. ಸುಧಾಕರ್ ಕೂಡ ನಮ್ಮನ್ನು ಸೇರಿಕೊಳ್ಳಲಿದ್ದಾರೆ. ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸುಧಾಕರ್ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಾಜ್ಯ ಸರ್ಕಾರ ಪತನಗೊಳಿಸುವ ಪ್ರಯತ್ನದ ಹಿಂದಿದೆಯಾ ಬಿಜೆಪಿ ನಾಯಕರ ಪಾತ್ರ...?

    View Results

    Loading ... Loading ...