alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ಭಾರತೀಯ ಬ್ಯಾಂಕ್ ಗಳಿಗೆ ವಂಚಿಸಿ ವಿದೇಶಕ್ಕೆ ಹಾರಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬುಧವಾರ ಮುಂಬೈನ ಸ್ಪೆಷಲ್  ಕೋರ್ಟ್ ಮಲ್ಯ ಬಂಧನಕ್ಕೆ ಆದೇಶ ನೀಡಿದೆ. 6,000 ಕೋಟಿ ರೂಪಾಯಿ ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಕೋರ್ಟ್ ಮಲ್ಯ ಬಂಧನಕ್ಕೆ ಆದೇಶ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಕೋರ್ಟ್ ನ ನ್ಯಾಯಾಧೀಶ ಎಂ.ಎಸ್.ಆಜ್ಮಿ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ್ದಾರೆ. ಐಡಿ ಮಲ್ಯ ವಿರುದ್ಧ ಹೊಸ ಚಾರ್ಜ್ ಶೀಟ್ ದಾಖಲಿಸಿತ್ತು. ಕೋರ್ಟ್ ಮಲ್ಯರ ಕಿಂಗ್ ಫಿಶರ್ ಏರ್ಲೈನ್ಸ್ ಹಾಗೂ ಯುನೈಟೆಡ್ ಬ್ರೂವರೀಸ್ ಹೋಲ್ಡಿಂಗ್ ಲಿಮಿಟೆಡ್ ಗೆ ಸಮನ್ಸ್ ಜಾರಿಗೊಳಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಜುಲೈ 30ರಂದು ನಡೆಯಲಿದೆ.

ಹಿಂದಿನ ವರ್ಷ ಐಡಿ ಮಲ್ಯ ವಿರುದ್ಧ 900 ಕೋಟಿ ರೂಪಾಯಿ ವಂಚನೆ ವಿರುದ್ಧ ಮೊದಲ ಚಾರ್ಜ್ ಶೀಟ್ ಸಲ್ಲಿಸಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ನಂತ್ರ ಹೊಸ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...