alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಹಾಡಹಗಲೇ ನಡೆದ ಕೃತ್ಯ

cctv-footage-shows-delhi-man-being-shot-dead-in-broad-daylightರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹಾಡಹಗಲೇ ನಡೆದಿರುವ ಭೀಕರ ಕೃತ್ಯವೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ನೇಹಿತನೊಂದಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಬೈಕ್ ನಲ್ಲಿ ಬಂದವರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಫೆಬ್ರವರಿ 19 ರಂದು ನಜಾಫ್ ಗರ್ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬ ಕ್ರಿಕೆಟ್ ಆಟವಾಡಿ ಸ್ನೇಹಿತನೊಂದಿಗೆ ಸ್ಕೂಟರ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಸ್ಕೂಟರ್ ಅಡ್ಡಗಟ್ಟಿದ್ದಾರೆ.

ಬೈಕ್ ನಿಂದ ಇಳಿದು ಬಂದವನೊಬ್ಬ ಸ್ಕೂಟರ್ ಹಿಂಬದಿ ಕುಳಿತಿದ್ದ ಯುವಕನ ತಲೆಗೆ ಗುಂಡು ಹಾರಿಸಿದ್ದಾನೆ. ಕೆಳಗೆ ಬಿದ್ದ ಯುವಕನ ಮೇಲೆ ಮತ್ತೆರೆಡು ಗುಂಡು ಹಾರಿಸಿದ ಆತ, ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಕ್ಷಣಾರ್ಧದಲ್ಲಿ ನಡೆದ ಈ ಘಟನೆಯಿಂದ ಬೆಚ್ಚಿ ಬಿದ್ದ ಸಾರ್ವಜನಿಕರು ಸಾವರಿಸಿಕೊಂಡು ಗುಂಡು ತಗುಲಿ ಕೆಳಗೆ ಬಿದ್ದಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...