alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ರಕರ್ತನ ಮೇಲೆ ಗುಂಡಿನ ದಾಳಿ

fire 456

ಲಖ್ನೋ: ಪತ್ರಕರ್ತರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿ ನಡೆದಿದೆ. ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕರುಣ್ ಮಿಶ್ರಾ ಕೊಲೆಯಾದವರು. ಅವರು ಬೈಕ್ ನಲ್ಲಿ ಕೆಲಸಕ್ಕೆ ಹೊರಟಿದ್ದ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ.

ಹಿಂದಿ ದಿನಪತ್ರಿಕೆ ‘ಜನಸಂದೇಶ ಟೈಮ್ಸ್’ನಲ್ಲಿ ಕರುಣ್ ಮಿಶ್ರಾ ಅವರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು. ಸುಲ್ತಾನ್ ಪುರದ ಗೋಸಾಯ್ ಗಂಜ್ ಪ್ರದೇಶದಲ್ಲಿರುವ ತಮ್ಮ ಮನೆಯಿಂದ ಬೈಕ್ ನಲ್ಲಿ ಹೊರಟಿದ್ದ ಸಂದರ್ಭದಲ್ಲಿ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ, ಅವರು ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಗೆ ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...