alex Certify
ಕನ್ನಡ ದುನಿಯಾ       Mobile App
       

Kannada Duniya

ಮುಸ್ಲಿಂ ಮಹಿಳೆಗೆ ದುಬಾರಿಯಾಯ್ತು ಮೋದಿ ಚಿತ್ರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಚಿತ್ರ ಬಿಡಿಸಿರುವುದು ಮುಸ್ಲಿಂ ಮಹಿಳೆಗೆ ದುಬಾರಿಯಾಗಿ ಪರಿಣಮಿಸಿದೆ. ಮಹಿಳೆ ಗಂಡನ ಮನೆಯವರು ಆಕೆಯನ್ನು ಮನೆಯಿಂದ ಹೊರ ಹಾಕಿದ್ದಾರೆ. ಸದ್ಯ ಆರು ಜನರ ವಿರುದ್ಧ ದೂರು ದಾಖಲಾಗಿದೆ.

ಘಟನೆ ನಡೆದಿರುವುದು ಉತ್ತರ ಪ್ರದೇಶದಲ್ಲಿ. ಮಹಿಳೆ ತಂದೆ, ಅಳಿಯ ಸೇರಿದಂತೆ ಆರು ಮಂದಿ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಪತಿ ಕಡೆಯವರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಪೀಡಿತೆಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮಹಿಳೆ ತಂದೆ ಪ್ರಕಾರ, ಪೀಡಿತೆ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಅವರ ನಗು ಮೊಗದ ಚಿತ್ರ ಬಿಡಿಸಿದ್ದಾಳಂತೆ. ಅದನ್ನು ಪತಿ ಹಾಗೂ ಕುಟುಂಬಸ್ಥರಿಗೆ ತೋರಿಸಿದ್ದಾಳೆ. ಇದ್ರಿಂದ ಕೋಪಗೊಂಡ ಪತಿ ಕಡೆಯವರು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ. ನಂತ್ರ ಮನೆಯಿಂದ ಹೊರ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...