alex Certify
ಕನ್ನಡ ದುನಿಯಾ       Mobile App
       

Kannada Duniya

‘ನಾವು ಶಿವಭಕ್ತರು, ಧರ್ಮದ ದಲ್ಲಾಳಿ ಮಾಡುವವರಲ್ಲ’

ನವದೆಹಲಿ: ಗುಜರಾತ್ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಸೌರಾಷ್ಟ್ರದ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದರು. ಅವರು ಹಿಂದೂಯೇತರ ಕಾಲಂನಲ್ಲಿ ಸಹಿ ಮಾಡಿದ್ದರೆನ್ನಲಾದ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ನಾವು ಶಿವನ ಭಕ್ತರು. ಧರ್ಮದ ದಲ್ಲಾಳಿಗಳಲ್ಲ. ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುವವರು ನಾವಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಮ್ಮ ಧರ್ಮದ, ಭಕ್ತಿಯ ಕುರಿತಾಗಿ ಯಾರ ಪ್ರಮಾಣಪತ್ರದ ಅವಶ್ಯಕತೆ ನಮಗಿಲ್ಲ. ಧರ್ಮದ ದಲ್ಲಾಳಿ ಮಾಡುವವರು ನಾವಲ್ಲ ಎಂದು ಹೇಳಿದ್ದಾರೆ.

ನನ್ನ ಅಜ್ಜಿ(ಇಂದಿರಾ ಗಾಂಧಿ) ಮತ್ತು ನಮ್ಮ ಕುಟುಂಬದವರೆಲ್ಲಾ ಶಿವನ ಭಕ್ತರು. ಅಂತಹ ವಿಷಯಗಳನ್ನು ನಾವು ಖಾಸಗಿಯಾಗಿ ಇಡುತ್ತೇವೆ. ಭಕ್ತಿ ವೈಯಕ್ತಿಕ ವಿಷಯವಾಗಿರುವುದರಿಂದ ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ಮತ್ತು ಜವಾಹರಲಾಲ್ ನೆಹರೂ ನಡುವೆ ರಾಜಕೀಯ –ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ಅವರು ಉತ್ತಮ ಸ್ನೇಹಿತರಾಗಿದ್ದರು. ಆದರೆ, ಇತ್ತೀಚೆಗೆ ಅವರನ್ನು ಶತ್ರುಗಳಂತೆ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...