alex Certify
ಕನ್ನಡ ದುನಿಯಾ       Mobile App
       

Kannada Duniya

ದಾವೂದ್ ನನ್ನು ಭೇಟಿ ಮಾಡಿದ್ರಂತೆ ಪ್ರಧಾನಿ..!

Narendra-Modi-about-Dawood-

ಪ್ರಧಾನಿ ನರೇಂದ್ರ ಮೋದಿ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದರು ಎಂದು ಉತ್ತರ ಪ್ರದೇಶದ ಸಚಿವ ಆಜಂ ಖಾನ್ ಆರೋಪಿಸಿದ್ದಾರೆ. ಮೋದಿ ಲಾಹೋರ್ ಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ನಿವಾಸದಲ್ಲಿ ದಾವೂದ್ ಇಬ್ರಾಹಿಂನನ್ನು ಭೇಟಿ ಮಾಡಿದ್ದರು ಎಂದು ಹೇಳಿದ್ದಾರೆ.

ಪಾಕ್ ಪ್ರಧಾನಿ ನವಾಜ್ ಶರೀಫ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಹೋಗಿದ್ದ ಮೋದಿ ಇದೇ ಸಂದರ್ಭದಲ್ಲಿ ದಾವೂದ್ ಜೊತೆ ಮಾತನಾಡಿದ್ದಾರೆ. ಅಲ್ಲದೇ, ಆಗ ಅಂತರರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ನಾನು ಮಾಡಿರುವ ಆರೋಪಕ್ಕೆ ಪ್ರಧಾನಿಯವರು ಪ್ರತಿಕ್ರಿಯೆ ನೀಡಲಿ ಎಂದು ಆಜಂಖಾನ್ ಒತ್ತಾಯಿಸಿದ್ದಾರೆ. ಆಜಂ ಖಾನ್ ಹೇಳಿಕೆಯನ್ನು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ತಳ್ಳಿಹಾಕಿದ್ದು, ಇದೊಂದು ಅಸಂಬದ್ಧ ಹೇಳಿಕೆ ಎಂದು ತಿಳಿಸಿವೆ.

ಪದೇ, ಪದೇ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡುವ ಆಜಂ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಬಿಜೆಪಿ ಒತ್ತಾಯಿಸಿದೆ. ಕಾಂಗ್ರೆಸ್, ಆಜಂ ಖಾನ್ ಹೇಳಿಕೆಯನ್ನು ಕಡೆಗಣಿಸಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...