alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲೆಬ್ರಿಟಿಗಳ ಟ್ವಿಟ್ಟರ್ ಫಾಲೋವರ್ಸ್ ಗಳ ಸಂಖ್ಯೆಯಲ್ಲಿ ಏಕಾಏಕಿ ಇಳಿಕೆ, ಕಾರಣವೇನು ಗೊತ್ತಾ?

ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸಾಮಾನ್ಯರೊಂದಿಗೆ ಸಂವಹನ ನಡೆಸಲು ಸಾಮಾಜಿಕ ಜಾಲತಾಣಗಳು ಮಾಧ್ಯಮವಾಗಿವೆ. ಪ್ರಧಾನಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿದವರ ವಿಶ್ವ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಆದರೆ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿಯವರಾದಿಯಾಗಿ ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವರ ಫಾಲೋವರ್ಸ್ ಗಳ ಸಂಖ್ಯೆಯಲ್ಲಿ ಏಕಾಏಕಿ ಇಳಿಕೆಯಾಗುತ್ತಿದೆ.

ಇದಕ್ಕೆ ಕಾರಣ ನಕಲಿ ಅಕೌಂಟ್ ಗಳ ವಿರುದ್ಧ ಟ್ವಿಟರ್ ಸಂಸ್ಥೆ ಸಮರ ಸಾರಿರುವುದು. ನಕಲಿ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಟ್ವಿಟರ್ ಇಂತಹ ಖಾತೆಗಳನ್ನು ಸ್ಥಗಿತಗೊಳಿಸುತ್ತಿದೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್ ಬಚ್ಚನ್, ರಾಹುಲ್ ಗಾಂಧಿ ಮೊದಲಾದವರು ಮಾತ್ರವಲ್ಲದೆ ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಬಹಳಷ್ಟು ಮಂದಿಯ ಫಾಲೋವರ್ಸ್ ಗಳ ಸಂಖ್ಯೆಯಲ್ಲಿ ಏಕಾಏಕಿ ಇಳಿಮುಖವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...